ಜಲಜೀವನ್ ಮಿಷನ್ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಹೆಸಲ್ ಗ್ರಾಮಕ್ಕೆ ಸಂಪರ್ಕಿಸುವ ಸಂತೆ ಮೈದಾನ ರಸ್ತೆಯಲ್ಲಿ ಬುಧವಾರ ನಡೆದಿದೆ.
ಸಾವನಪ್ಪಿರುವ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಸುಪ್ರಿತಾ (26), ಅಪಘಾತದಲ್ಲಿ ಕ್ರೇನ್‌ನ ಟಯರ್ ಯುವತಿ ಮೇಲೆ ಹರಿದಿದೆ. ದ್ವಿಚಕ್ರ ವಾಹನದಲ್ಲಿದ್ದ ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದೆ. ಕ್ರೇನ್ ಬ್ರೇಕ್ ಫೇಲ್ ಆಗಿತ್ತೋ ಅಥವಾ ಚಾಲಕನ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆಯಾ! ಎಂದು ತನಿಖೆ ನಂತರ ಗೊತ್ತಾಗುತ್ತದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚಾರ್ಮಾಡಿ ಘಾಟ್; ರಸ್ತೆ ಅಪಘಾತ
ಈ ಪ್ರಕರಣ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಘಟನೆ ಕುರಿತು ತನಿಖೆ ಆರಂಭವಾಗಿದೆ.





