ಜನವರಿ 17ರಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು, ಜಿಲ್ಲಾ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರು ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಚುನಾವಣೆ ನಡೆಸಲು ಕಳೆದ ಜೂನ್ 30 ರಂದು ಹೊರಡಿಸಲಾಗಿದ್ದ ಅಧಿಸೂಚನೆ ಹಿಂಪಡೆಯಲಾಗಿತ್ತು. ಆದರೇ, ಜನವರಿ 9 ನಾಮಪತ್ರಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದ್ದು, ಜ.10 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.ಜ.11 ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಅಗತ್ಯವಿದ್ದಲ್ಲಿ ಜ.17 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮತದಾನದ ಬಳಿಕ ಮತ ಎಣಿಕೆ ನಡೆಯಲಿದೆಯಲ್ಲದೆ, ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಅವರು ವೇಳಾಪಟ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಗಾಂಜಾ ಮಾರಾಟ; ಆರೋಪಿ ಬಂಧನ
ಈ ಕುರಿತು ಉಚ್ಚ ನ್ಯಾಯಾಲಯವು ನವೆಂಬರ್ 27ರಂದು ಚುನಾವಣೆ ನಡೆಸುವಂತೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತರು ಜನವರಿ 17 ರಂದು ಚುನಾವಣೆ ನಡೆಸಲು ಅನುಮತಿಸಿದೆ.





