ಚಿಕ್ಕಮಗಳೂರು l ಕುಡಿದ ಅಮಲಿನಲ್ಲಿ ಸುಳ್ಳು ಹೇಳಿ ಆಂಬುಲೆನ್ಸ್ ಕರೆಸಿದ ಕುಡುಕ 

Date:

ಎಣ್ಣೆ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ 108 ಕ್ಕೆ ಕರೆ ಮಾಡಿ ಬಸ್ ನಿಲ್ದಾಣ ಬಳಿ ಗಲಾಟೆ ಆಗುತ್ತಿದೆ ಬೇಗ ಬನ್ನಿ, ಎಂದು ಸುಳ್ಳು ಹೇಳಿ ಆಂಬುಲೆನ್ಸ್ ಕರೆಸಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ  ಶೃಂಗೇರಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿ ನಡೆದಿದೆ.

ಶೃಂಗೇರಿ ಹಾಗೂ ಕೊಪ್ಪ ತಾಲ್ಲೂಕಿನಲ್ಲಿ 108 ಆಂಬುಲೆನ್ಸ್ ಇರುವುದೇ ಕಡಿಮೆ. ಇದರ ಪರಿಣಾಮವಾಗಿ ಸುಮಾರು 45 ಕಿ. ಮೀ ದೂರವಿರುವ ಬಾಳೆಹೊನ್ನೂರು ಹೋಬಳಿಯಿಂದ 108 ಆಂಬುಲೆನ್ಸ್ ಬಂದಿದೆ‌. ಸ್ಥಳಕ್ಕೆ ಆಂಬುಲೆನ್ಸ್ ಸಿಬ್ಬಂದಿಗಳು ಬಂದು ನೋಡಿದಾಗ ಯಾವ ಗಲಾಟೆಯೂ ಇಲ್ಲ. ಅನಾರೋಗ್ಯ ಪೀಡಿತರಾಗಿರುವವರು ಇಲ್ಲವೆಂದು ತಿಳಿದಾಗ, ಕುಡುಕನ ಹುಚ್ಚಾಟಕ್ಕೆ ಸಿಬ್ಬಂದಿಗಳಿಗೆ ಸಮಯ ವ್ಯರ್ಥಮಾಡಿದಂತಾಗಿದೆ.

ಈ ಘಟನೆ ಕುರಿತು ಆಂಬುಲೆನ್ಸ್ ಸಿಬ್ಬಂದಿಗಳು 112ಕ್ಕೆ ಕರೆ ಮಾಡಿ ವಿಚಾರ ತಿಳಿಸಿದಾಗ, ಪೊಲೀಸರು ಕುಡಿತ ವ್ಯಕ್ತಿಗೆ ಕರೆ ಮಾಡಿ ವಿಚಾರಿಸಿದಾಗ ನಾನು ಭೂಮಿ ಮೇಲೆ, ಆಕಾಶದ ಕೆಳಗೆ ಇದ್ದೀನಿ.. ತಾಕತ್ತಿದ್ರೆ ನನ್ನ ಹಿಡೀರಿ ನೋಡೋಣ’ ಎಂದು ಪೊಲೀಸರಿಗೆ ಸವಾಲು ಹಾಕಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಹಾಡ್ ಸತ್ಯಗ್ರಹ ನೆನಪಿನಲ್ಲಿ ಶೋಷಿತರ ಸಂಘರ್ಷ ಕಾರ್ಯಕ್ರಮ ಯಶಸ್ವಿ; ದಸಂಸ

ಪೊಲೀಸರು ಹಾಗೂ ಸ್ಥಳೀಯರು ಹುಡುಕಿದರೂ ಕೆಲವು ಕಾಲ ವ್ಯಕ್ತಿ ಸಿಕ್ಕಿರಲಿಲ್ಲ. ನಂತರ ಶೃಂಗೇರಿ ಪಟ್ಟಣದ ವೈನ್ ಅಂಗಡಿ ಬಳಿ ಇದ್ದ, ಪಟ್ಟಣದ ಆಟೋ ಚಾಲಕರು ಕುಡುಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...