ಚಿಕ್ಕಮಗಳೂರು l ನೂತನ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ, ವಸತಿ ಗೃಹ ಉದ್ಘಾಟನೆ; ಸಚಿವ ರಾಮಲಿಂಗಾ ರೆಡ್ಡಿ

Date:

ಚಿಕ್ಕಮಗಳೂರು ಬಸ್ ನಿಲ್ದಾಣದ ಶಂಕುಸ್ಥಾಪನಾ ಸಿಬ್ಬಂದಿಗಳ ನೂತನ ವಸತಿ ಗೃಹವನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಹಾಗೂ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಸಾರಿಗೆ ಸಚಿವರು, ಬಸ್ ನಿಲ್ದಾಣ ಆಗಬೇಕೆನ್ನುವುದು ಬಹಳ ಹಿಂದಿನಿಂದಲೂ ಬೇಡಿಕೆಯಿತ್ತು. 2025ರಲ್ಲಿ ರೂ.19.87 ಕೋಟಿ ವೆಚ್ಚದಲ್ಲಿ ಒಂದು ಎಕರೆ 20 ಗುಂಟೆ ನಿವೇಶನದಲ್ಲಿ ಆಧುನಿಕ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಚಿಕ್ಕಮಗಳೂರು ಸಾರಿಗೆ  ವಿಭಾಗಕ್ಕೆ ಸೇರಿರುವ ಪ್ರಮುಖ ಸ್ಥಳಗಳಿಗೆ ಸಮಗ್ರ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ: ಅರಸೀಕೆರೆಯಲ್ಲಿ 1 ಎಕರೆ 7.5 ಗುಂಟೆ ವಿಸ್ತೀರ್ಣದಲ್ಲಿ ರೂ 1958 .00 ಲಕ್ಷಗಳ ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣದ ನಿರ್ಮಾಣಕ್ಕೆ ದಿನಾಂಕ:26-07-2025 ರಂದು ಸನ್ಮಾನ್ಯ ಮುಖ್ಯ ಮಂತ್ರಿಗಳಿಂದ ಶಂಕುಸ್ಥಾಪನೆನೆರವೇರಿಸಲಾಯಿತು. ಕಡೂರು ಬಸ್ ನಿಲ್ದಾಣ 2 ಎಕರೆ 30 ಗುಂಟೆ ವಿಸ್ತೀರ್ಣದಲ್ಲಿ  ರೂ 12 ಕೋಟಿ ವೆಚ್ಚ. ತರೀಕೆರೆ ಬಸ್ ನಿಲ್ದಾಣ 02 ಎಕರೆ 16 ಗುಂಟೆ,  ರೂ 9.15 ಕೋಟಿ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ. ಕಡೂರು ಬಸ್ ಘಟಕದ ನಿವೇಶನದಲ್ಲಿ ನಿರ್ಮಿಸಿರುವ ರೂ.123 ಲಕ್ಷಗಳ‌ ವೆಚ್ಚದ ವಸತಿ ಗೃಹಕ್ಕೆ ದಿನಾಂಕ: 24-09-2025 ರಂದು ಉದ್ಘಾಟನೆಯಾಗಿದೆ ಎನ್ನಲಾಗಿದೆ.

ಮುಂದುವರೆದು, ಚಿಕ್ಕಮಗಳೂರಿನಲ್ಲಿ ರೂ 2.30 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಒಂದು ಬಿ ಎಚ್ ಕೆ ಮೂರು ಅಂತಸ್ತಿನ ಸಿಬ್ಬಂದಿ ವಸತಿಗೃಹಗಳನ್ನು ಸಹ ದಿನಾಂಕ 18-11-2025 ರಂದು ಉದ್ಘಾಟಿಸಲಾಗಿದೆ. ನೌಕರರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರವು ಪ್ರಸಕ್ತ ವರ್ಷ ಹೊಸದಾಗಿ 2000 ಬಸ್ಸುಗಳನ್ನು ಸೇರ್ಪಡೆಗೊಳಿಸಲು ನಾಲ್ಕು ನಿಗಮಗಳಿಗೆ ಅನುಮೋದನೆ ನೀಡಿದ್ದು, ಅದರಲ್ಲಿ 900 ಬಸ್ಸುಗಳನ್ನು ಕೆ ಎಸ್ ಆರ್ ಟಿ ಸಿ ಗೆ ನೀಡಲಾಗಿದ್ದು,  ನಿಗಮದ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಗೆ ಸದರಿ ಬಸ್ಸುಗಳನ್ನು ಹಂಚಿಕೆ ಮಾಡುವ ಸಂದರ್ಭದಲ್ಲಿ ಚಿಕ್ಕಮಗಳೂರು ವಿಭಾಗಕ್ಕೆ ಸಹ ಹೊಸ ಬಸ್ಸುಗಳನ್ನು ನೀಡಲಾಗುವುದು. ಶಕ್ತಿ ಯೋಜನೆಯಡಿ 600 ಕೋಟಿ ಮಹಿಳಾ ಟಿಕೇಟ್ ವಿತರಣೆಯಾಗಿ ಹೊಸ ಮೈಲಿಗಲ್ಲನ್ನು ದಾಖಲಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮುತ್ತಿನಕೊಪ್ಪದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಪೂರ್ವ ಸಿದ್ಧತೆ

ಈ ಸಂದರ್ಭದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮಾನ್ಯ ಶಾಸಕರಾದ ಟಿ.ಡಿ.ರಾಜೇಗೌಡ, ಹೆಚ್.ಡಿ. ತಮ್ಮಯ್ಯ,  ಭದ್ರಾ ಕಾಡಾ ಮಾನ್ಯ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಮಾನ್ಯ ಅಧ್ಯಕ್ಷ ಬಿ.ಹೆಚ್.ಹರೀಶ್, ನಗರಸಭೆ ಮಾನ್ಯ ಅಧ್ಯಕ್ಷೆ ಶ್ರೀಮತಿ ಬಿ.ಶೀಲಾ ದಿನೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಮಾನ್ಯ ಅಧ್ಯಕ್ಷ ಮೊಹಮ್ಮದ್ ನಯಾಜ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...