ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಖರಾಯಪಟ್ಟಣದಲ್ಲಿ ಹತ್ಯೆಯಾದ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಗೌಡ ಅಂತ್ಯಕ್ರಿಯೆಗೆ ಎಲ್ಲಾ ಕಾರ್ಯಕರ್ತರಿಗೆ ವ್ಯವಸ್ಥೆ ಮಾಡಲಾಯಿತು.
ಮೃತರ ಅಂತಿಮ ದರ್ಶನ ಪಡೆಯಲು ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ವೇಳೆ ಶಾಸಕ ತಮ್ಮಯ್ಯ, ಮಾಜಿ ಸಭಾಪತಿ ಬಿ.ಎಲ್. ಶಂಕರ್ ಹಾಗೂ ಮಾಜಿ ಎಂಎಲ್‌ಸಿ ಗಾಯತ್ರಿ ಶಾಂತೇಗೌಡ ಅವರು ಮೃತದೇಹದ ಅಂತಿಮ ದರ್ಶನ ಪಡೆದಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ರಸ್ತೆ ಅಪಘಾತ; ಬಾಲಕಿ ಸಾವು
ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮಗನ ಹತ್ಯೆಯಿಂದಾಗಿ ಆಘಾತಕ್ಕೊಳಗಾಗಿರುವ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.





