ಚಿಕ್ಕಮಗಳೂರು l ಅಕ್ರಮ ಗಾಂಜಾ ಮಾರಾಟ: ಇಬ್ಬರ ಆರೋಪಿಗಳಿಗೆ ದಂಡದ ಜೊತೆ ಜೈಲು ಶಿಕ್ಷೆ

Date:

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನಲ್ಲಿ ನಡೆದಿದೆ. 

ಮೋಟಾರ್ ಸೈಕಲ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮಹಮ್ಮದ್ ಫತಾವುಲ್ಲ ಮತ್ತು ಪ್ರವೀಣ್‌ ಎಂಬ ಇಬ್ಬರು ಆರೋಪಿಗಳು. 2025ರ ಫೆಬ್ರವರಿ 18ರಂದು ಮುತ್ತಿನಕೊಪ್ಪದಿಂದ ಲಕ್ಕಿನಕೊಪ್ಪದ್ದಲ್ಲಿ ಖಚಿತ ಮಾಹಿತಿ ಪಡೆದ ನರಸಿಂಹರಾಜಪುರ ಪೊಲೀಸರು ದಾಳಿ ನಡೆಸಿ, ಸುಮಾರು 104 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಎನ್‌.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿ, ನರಸಿಂಹರಾಜಪುರದ ಘನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜನವರಿ 6, 2026 ರಂದು ತಲಾ 6 ತಿಂಗಳ ಕಠಿಣ ಜೈಲು ಶಿಕ್ಷೆ ಹಾಗೂ 5,000 ರೂಪಾಯಿಗಳ ದಂಡ ವಿಧಿಸಿ ಆದೇಶಿಸಿದೆ. ಶಿಕ್ಷೆಯ ಜೊತೆಗೆ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ ಅನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ವಶಪಡಿಸಿಕೊಂಡ ಗಾಂಜಾವನ್ನು ಕಾನೂನುಬದ್ಧವಾಗಿ ವಿಲೇವಾರಿ ಮಾಡಲು ನ್ಯಾಯಾಲಯವು ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಕಳಸ | ಜನವಿರೋಧಿ ಅರಣ್ಯ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ

ಕಾರ್ಯಾಚರಣೆಯಲ್ಲಿ ಪಿಎಸ್‌ಐ ನಿರಂಜನ್ ಗೌಡ ಬಿ.ಎಸ್ ದಾಳಿ ನಡೆಸಿದ್ದರೆ, ಪಿಎಸ್‌ಐ ಜ್ಯೋತಿ ಎನ್.ಎ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಗದಿಗೆಪ್ಪ ಜಿ. ನೇಕರ್ ವಾದ ಮಂಡಿಸಿದ್ದು, ಪೊಲೀಸ್ ಸಿಬ್ಬಂದಿಗಳಾದ ಆಸಿಫ್ ಎನ್.ಯು, ಪರಮೇಶ, ನವೀನ್ ಮತ್ತು ಸೋಮೇಶ ಅವರು ತನಿಖೆ ಹಾಗೂ ನ್ಯಾಯಾಲಯದ ಕರ್ತವ್ಯದಲ್ಲಿ ಸಹಕರಿಸಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...