ಚಿಕ್ಕಮಗಳೂರು l ಹೊಸ ವರ್ಷಾಚರಣೆ; ಅಹಿತಕರ ಘಟನೆ ಸಂಭವಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ

Date:

ಚಿಕ್ಕಮಗಳೂರು ಜಿಲ್ಲೆಯಲ್ಲಿ 2026ರ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಹೋಟೆಲ್, ಹೋಂ ಸ್ಟೇ, ರೆಸಾರ್ಟ್ ಹಾಗೂ ಬಾ‌ರ್ ಮಾಲೀಕರಿಗೆ ಶಾಂತಿಯುತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಲಾಗಿದೆ.

ಪ್ರವಾಸಿಗರ ತಾಣವಾಗಿರುವ ಕಾಫಿನಾಡಿನಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಪ್ರತೀ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಭೆಗಳನ್ನು ಆಯೋಜಿಸಲಾಗುತ್ತಿದ್ದು, ಮಾಲೀಕರು ಮತ್ತು ವ್ಯವಸ್ಥಾಪಕರು ಕಡ್ಡಾಯವಾಗಿ ಈ ಸಭೆಗಳಲ್ಲಿ ಭಾಗವಹಿಸಿ ಸೂಚನೆಗಳನ್ನು ಪಾಲಿಸಬೇಕಿದೆ. ಹೆಚ್ಚಿನ ಸುರಕ್ಷತೆಗೆ ಖಾಸಗಿ ಭದ್ರತಾ ಸಿಬ್ಬಂದಿಯನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ವಿದೇಶಿಯರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ವಿಶೇಷ ಆದ್ಯತೆ ನೀಡುವಂತೆ ತಿಳಿಸಲಾಗಿದೆ. ಹಾಗೆಯೇ, ಗುರುತಿನ ಚೀಟಿ ಹಾಗೂ ವಾಹನ ಪರವಾನಗಿಯಂತಹ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ಗಣಕೀಕೃತ ದಾಖಲೆಗಳನ್ನು ನಿರ್ವಹಿಸಬೇಕು. ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಸುವ ಮುನ್ನ ಪೊಲೀಸ್‌ ಅನುಮತಿ ಕಡ್ಡಾಯವಾಗಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಹಾಗೂ ಮಾಲಿನ್ಯಕರವಾಗಿರುವ ಪಟಾಕಿಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಖಾಸಗಿ ವಾಹನಕ್ಕೆ ಪೊಲೀಸ್ ಬೋರ್ಡ್ ಹಾಕಿ ಪ್ರವಾಸ; ದಂಡ ವಿಧಿಸಿದ ಪಿಎಸ್ಐ ರೇಣುಕಾ

ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅಪಾಯಕಾರಿ ಎತ್ತರದ ಸ್ಥಳಗಳಲ್ಲಿ ಅಥವಾ ಕಟ್ಟಡದ ಮೇಲ್ಬಾವಣಿಯ ಮೇಲೆ ಕಾರ್ಯಕ್ರಮಗಳನ್ನು ಆಯೋಜಿಸಬಾರದು.  ಸಿಬ್ಬಂದಿಗಳು ಪ್ರವಾಸಿಗರೊಂದಿಗೆ ಸೌಜನ್ಯದಿಂದ ವರ್ತಿಸಬೇಕೆಂದು ಪೊಲೀಸ್ ಇಲಾಖೆಯಿಂದ ತಿಳಿಸಲಾಗಿದೆ. ಕಾರ್ಯಕ್ರಮ ಮುಗಿದ ನಂತರ ಚಾಲಕರು ಕುಡಿದು ವಾಹನ ಚಲಾಯಿಸದಂತೆ ಸತತವಾಗಿ ಜಾಗೃತಿ ಮೂಡಿಸಬೇಕು, ಇಲ್ಲವಾದಲ್ಲಿ ಅಂತಹವರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು. ಯಾವುದೇ ತುರ್ತು ಸಂದರ್ಭ ಅಥವಾ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್‌ ಠಾಣೆ ಅಥವಾ ಜಿಲ್ಲಾ ನಿಯಂತ್ರಣ ಕೊಠಡಿಯ ಸಂಖ್ಯೆ 9480805100ಗೆ ಕರೆ ಅಥವಾ ವಾಟ್ಸಪ್ ಮೂಲಕ ಮಾಹಿತಿ ನೀಡಿ ಶಾಂತಿಯುತ ವರ್ಷಾಚರಣೆಗೆ ಸಹಕರಿಸಲು ಪೊಲೀಸ್ ಇಲಾಖೆಯಿಂದ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...