ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

Date:

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ಅದೇಶಿಸಿದೆ.

ಪೋಕ್ಸೋ ಪ್ರಕರಣದ ಆರೋಪಿಗಳಾದ ಕಿರಣ್ ನಾಯಕ ಬಿನ್ ರಂಗಸ್ವಾಮಿ ನಾಯ್ಕ (21), ಮತ್ತೊಬ್ಬ ಆರೋಪಿ ಅಭಿಷೇಕ್ ನಾಯ್ಕ ಬಿನ್ ಧನಪಾಲ್ ನಾಯಕ (23), ಇಬ್ಬರು ಕಡೂರು ತಾಲೂಕು, ಚಿಕ್ಕಂಗಳ ಗ್ರಾಮದವರಾಗಿದ್ದಾರೆ. 23.11.2023 ರಂದು ಅಪ್ರಾಪ್ತ ಬಾಲಕಿಯನ್ನು ಕಡೂರಿ ತಾಲೂಕಿನ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ, ಕೊಲೆ ಬೆದರಿಕೆ ಹಾಕಿರುವುದಾಗಿ ಬಾಲಕಿ ನೀಡಿರುವ ದೂರಿನಲ್ಲಿ ಉಲ್ಲೆಖಿಸಲಾಗಿತ್ತು. ಕಡೂರು ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ:  312/23. ಕಲಂ 363, 366(a), 376(2)(n), 342, 506, 114 ಐಪಿಸಿ ಹಾಗೂ 6, 8,12,17,18 ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗಿತ್ತು.

ಕಡೂರು ವೃತ್ತ ನಿರೀಕ್ಷಕರಾಗಿದ್ದ ಕೆ ಆರ್ ಶಿವಕುಮಾರ್ ಈ ಪ್ರಕರಣದ ಸಂಪೂರ್ಣ ತನಿಖೆಯನ್ನು ಕೈಗೊಂಡಿದ್ದು, ಕಡೂರಿನ ಪ್ರಭಾರೆ ವೃತ್ತ ನಿರೀಕ್ಷಕರಾಗಿದ್ದ ಶ್ರೀಕಾಂತ್ ವೃತ್ತ ನಿರೀಕ್ಷಕರು ಬೀರೂರು ವೃತ್ತ, ಆರೋಪಿತರ ವಿರುದ್ಧ  ಚಿಕ್ಕಮಗಳೂರಿನ ಘನ ಪೋಕ್ಸೋ  ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ವಿಶೇಷ ಸರ್ಕಾರಿ ಅಭಿಯೋಜಕರಾದ ಭರತ್ ಕುಮಾರ್ ವಾದ ಮಂಡಿಸಿದ್ದು, ಘನ ನ್ಯಾಯಾಲಯವು ಆರೋಪಿಗಳಿಗೆ ಕಲಂ 363, 366, 342, 506 ಐಪಿಸಿ & 8, 12, ಪೋಕ್ಸೋ ಕಾಯ್ದೆ ಅಡಿಯಲ್ಲಿ ಒಂದನೇ ಆರೋಪಿಗೆ ಹತ್ತು ವರ್ಷ ಕಾರಾಗೃಹ 41,000 ದಂಡ ಎರಡನೇ ಆರೋಪಿಗೆ ಹತ್ತು ವರ್ಷ ಶಿಕ್ಷೆ 11,000 ದಂಡ ವಿಧಿಸಿರುತ್ತೆ. ಹಾಗೂ ನೊಂದ ಬಾಲಕಿಗೆ ಒಂದು ಲಕ್ಷ ರೂ ಪರಿಹಾರ ನೀಡುವಂತೆ  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ಹೊರಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಈ ಕುರಿತು ಪ್ರಕರಣದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಸಿಬ್ಬಂದಿಯವರು ಹಾಗೂ ಸರ್ಕಾರಿ ಅಭಿಯೋಜಕರಿಗೆ ಪೊಲೀಸ್ ಅಧೀಕ್ಷಕರು ಚಿಕ್ಕಮಗಳೂರು ಜಿಲ್ಲೆಯವರು ಅಭಿನಂಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...