ಚಿಕ್ಕಮಗಳೂರು l ಪ್ರಮೋದ್‌ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ; ಕಡಿವಾಣಕ್ಕೆ ಒತ್ತಾಯ

Date:

ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ನೀಡಿದ ಹೇಳಿಕೆಗಳು ಪ್ರಚೋದನಕಾರಿ ಮತ್ತು ಶಾಂತಿ ಭಂಗಗೊಳಿಸುವಂತಿವೆ ಎಂದು ಸೈಯದ್ ಬಾಬಾ ಬುಡನ್ ಶಾ ಖಾದ್ರಿ ವಂಶಸ್ಥ ಫಕ್ರುದ್ದೀನ್ ಶಾ ಖಾದ್ರಿ ಅವರು ಪೊಲೀಸರು ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾವು ಐತಿಹಾಸಿಕವಾಗಿ ಮೊಹಮ್ಮದೀಯ ಸಂಸ್ಥೆಯಾಗಿದ್ದು, ಮೈಸೂರು ಮಹಾರಾಜರ ಆಡಳಿತದಲ್ಲೂ ‘ಮುಹಮ್ಮದನ್ ಇನ್‌ಸ್ಟಿಟ್ಯೂಟ್’ ಎಂದೇ ಗುರುತಿಸಲ್ಪಟ್ಟಿದೆ. ಇಸ್ಲಾಂ ಧರ್ಮದಲ್ಲಿ ಆರತಿ, ಮೂರ್ತಿ ಪೂಜೆ ಇಲ್ಲ, ದತ್ತಪೀಠವನ್ನು ಮುಸ್ಲಿಮರು ಹೇಗೆ ಆಳುತ್ತಾರೆ ಎಂಬ ಮುತಾಲಿಕ್ ಹೇಳಿಕೆ ಪ್ರಚೋದನಕಾರಿಯಾಗಿದೆ. ದರ್ಗಾದಲ್ಲಿ ಯಾವುದೇ ಮೂರ್ತಿ ಪೂಜೆ ಅಥವಾ ಹಿಂದೂ ಪೂಜೆ ನಡೆದಿಲ್ಲ ಅಲ್ಲಿ ಚಿಲ್ಲಾ, ಪಾದುಕೆ, ಗಾದಿ ಮತ್ತು ಸಮಾಧಿಗಳಿವೆ. ಕೆಲವರು ರಾಜಕೀಯ ಉದ್ದೇಶದಿಂದ ಧಾರ್ಮಿಕ ಚಟುವಟಿಕೆಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಸೈಯದ್ ಬಾಬಾ ಬುಡನ್ ಶಾ ಖಾದ್ರಿ ವಂಶಸ್ಥ ಫಕ್ರುದ್ದೀನ್ ಶಾ ಖಾದ್ರಿ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಎಚ್ಐವಿ ಕುರಿತು ಅರಿವು ಕಾರ್ಯಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ದಿನಗಳಲ್ಲಿ ಹೊಸ ಆಚರಣೆಗಳನ್ನು ತರುವ ಪ್ರಯತ್ನಗಳು ಮುಜರಾಯಿ ಮ್ಯಾನ್ಯುವಲ್, ಪ್ಲೇಸಸ್ ಆಫ್ ವರ್ಸಿಪ್ ಆಕ್ಟ್-1991 ಮತ್ತು ಸುಪ್ರೀಂ ಕೋರ್ಟ್ ಆದೇಶಗಳಿಗೆ ವಿರುದ್ಧವಾಗಿವೆ. ದರ್ಗಾದ ಪವಿತ್ರತೆ ಮತ್ತು ಐತಿಹಾಸಿಕ ಸಾನ್ನಿಧ್ಯವನ್ನು ಸುರಕ್ಷಿತಗೊಳಿಸಲು ಮತ್ತು ಪ್ರಚೋದನಕಾರಿ ಚಟುವಟಿಕೆಗಳು ನಡೆಯದಂತೆ ಜಿಲ್ಲಾಡಳಿತ ನೋಡಿಕೊಳ್ಳಬೇಕು ಎಂದು ಸೈಯದ್ ಬಾಬಾ ಬುಡನ್ ಶಾ ಖಾದ್ರಿ ವಂಶಸ್ಥ ಫಕ್ರುದ್ದೀನ್ ಶಾ ಖಾದ್ರಿ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...