ಚಿಕ್ಕಮಗಳೂರು l ಖಾಸಗಿ ಬಸ್ ಪಲ್ಟಿ: 25ಕ್ಕಿಂತ ಹೆಚ್ಚು ಜನರಿಗೆ ಗಾಯ; ಇಬ್ಬರಿಗೆ ಗಂಭೀರ

Date:

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದ ಬಳಿ ಶನಿವಾರ ನಡೆದಿದೆ.

ಚಲಿಸುತ್ತಿದ್ದ ಬಸ್ಸಿನಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡಲ್ಲಿ ನಿರಂತರ ಮಳೆಯಿಂದ ಮಲೆನಾಡಿನ ಸೌಂದರ್ಯ ನೋಡಲು ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬೇರೆ ಬೇರೆ ಜಿಲ್ಲೆಗಳಿಂದ ಭೇಟಿ ನೀಡುತ್ತಾರೆ. ಶನಿವಾರ ಕೂಡ ಕಳಸ ತಾಲೂಕಿನ ಕುದುರೆಮುಖದ ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಎಂದು ಬರುತ್ತಿದ್ದ ಬೆಂಗಳೂರು ಮೂಲದ ಖಾಸಗಿ ಬಸ್ ಮಳೆ–ಮಂಜುವಿನ ಕಾರಣದಿಂದಾಗಿ ತಿರುವಿನಲ್ಲಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕೂಡಲೇ ಸ್ಥಳೀಯರು ಬಸ್ಸಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ.

ಹಾಗೆಯೇ, 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರಗೊಂಡಿದೆ. ಬಸ್ಸಿನಲ್ಲಿದ್ದವರು ಬೆಂಗಳೂರಿನ ಎಂ.ಎನ್.ಸಿ. ಕಂಪನಿಯಲ್ಲಿ ಕೆಲಸ ಮಾಡುವ ಯುವಕ–ಯುವತಿಯರು. ವೀಕೆಂಡ್ ಹಿನ್ನೆಲೆ ಟ್ರಕ್ಕಿಂಗ್ ಗೆ ಎಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕುಡಿದ ಮತ್ತಿನಲ್ಲಿ ಪೊಲೀಸ್ ಸಿಬ್ಬಂದಿಯಿಂದ ದಲಿತ ಯುವಕನ ಮೇಲೆ ಹಲ್ಲೆ

ಈ ಸಂದರ್ಭದಲ್ಲಿ ಗಾಯಾಳುಗಳನ್ನ ಸಮಾಜ ಸೇವಕ ಆರೀಫ್, ಕೊಟ್ಟಿಗೆಹಾರ ಸಂಜಯ್, ಅತ್ತಿಗೆರೆ ಸಂತೋಷ್, ವಿನಯ್,  ಜಲಿಲ್, ವರುಣ್ ಸೇರಿದಂತೆ ಸ್ಥಳೀಯ ಯುವಕರು, ಮೂಡಿಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ, ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...