ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಕುಂಬರಡಿ ಗ್ರಾಮದಲ್ಲಿ ಬೈಕ್ ಮತ್ತು ಆಟೋ ನಡುವೆ ರಸ್ತೆ ಅಪಘಾತವಾಗಿರುವ ಘಟನೆ ನಡೆದಿದೆ.
ಮೂಡಿಗೆರೆ ಮಾರ್ಗದಿಂದ ಬರುತ್ತಿದ್ದ ಬೈಕ್, ಹೊಸಕೆರೆ ಮಾರ್ಗದ ಕಡೆಯಿಂದ ಬರುತ್ತಿದ್ದ ಆಟೋಗೆ ಕುಂಬರಡಿ ಗ್ರಾಮದ ಬಸ್ ನಿಲ್ದಾಣದ ಸಮೀಪದಲ್ಲಿ ಅಪಘಾತ ಸಂಭವಿಸಿದೆ, ಅಪಘಾತದಿಂದ ಆಟೋ ಮಗುಚಿ ಬಿದ್ದಿದರಿಂದ ಕೂಲಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಳ್ಳತನ ಪ್ರಕರಣ; ಚಿನ್ನಾಭರಣ, ನಗದು ಸಹಿತ ಆರೋಪಿ ಬಂಧನ
ಈ ಕುರಿತು ಗಾಯಳುಗಳನ್ನು ಸಮೀಪವಿರುವ ಸತ್ತಿಗನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣನಾದ ಬೈಕ್ ಮಾಲೀಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.





