ಕಾರು, ಬೈಕ್ ನಡುವೆ ಅಪಘಾತ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಟ್ಟೆ ತಿಮ್ಮನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಸ್ಥಳದಲ್ಲೇ ಮೃತಪಟ್ಟ ಬಾಲಕಿ ಲಹರಿ (6), ಬಾಲಕಿಯ ಸಹೋದರಿ ಸಿರಿ (8), ತಂದೆ ಪುನೀತ್ (37) ಹಾಗೂ ತಾಯಿ ಚೈತ್ರ (34) ಸ್ಥಿತಿ ಗಂಭೀರವಾಗಿದೆ. ಪುನೀತ್ ಎಂಬಾತ ಪತ್ನಿ, ಇಬ್ಬರು ಮಕ್ಕಳೊಂದಿಗೆ ಬೈಕಿನಲ್ಲಿ ಬರುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಅಪಘಾತಕ್ಕಿಡಾದ ವ್ಯಕ್ತಿಗಳನ್ನ ಚಿಕ್ಕಮಗಳೂರು ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇರಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ; ಕಡಿವಾಣಕ್ಕೆ ಒತ್ತಾಯ
ಈ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.





