ಚಿಕ್ಕಮಗಳೂರು: ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಅಪಘಾತಕ್ಕಿಡಾದ ದಾವಣಗೆರೆ ನೋಂದಣಿ ಹೊಂದಿದ್ದ ಕಿಯಾ ಕಾರಿನಲ್ಲಿದ್ದ ಕುಮಾರಪ್ಪ ಹಾಗೂ ಸತೀಶ್ ಎಂಬುವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿದ್ದಾರೆ. ಅದೇ ಮಾರ್ಗದಲ್ಲಿ ಬರುತ್ತಿದ್ದ ಬೈಕ್ ಸವಾರನಿಗೂ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ; ಐವರು ವಿದ್ಯಾರ್ಥಿಗಳು ಗಂಭೀರ
ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸಖರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಮುಂದುವರೆಸಿದ್ದಾರೆ. ಅಪಘಾತದಿಂದ ಗಾಯಗೊಂಡವರನ್ನು ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.





