ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ಬಳಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣಗೊಳ್ಳಲಿದೆ.
ಸೆಪ್ಟೆಂಬರ್ 24ರಂದು ಸಂಜೆ 5.30ಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬರಲಿದ್ದಾರೆ. ಅವರೇ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಪುನೀತ್ ರಾಜಕುಮಾರ್ ಅಭಿಮಾನಿ ಹಾಗೂ ವಿ ಸ್ಟಾರ್ ವೆಲೈಸ್ ಪ್ರೈವೇಟ್ ಲಿಮಿಟೆಡ್ ಮುಖ್ಯಸ್ಥ ಡಾ. ಅಪ್ಸರ್ ಹಿಂದುಸ್ತಾನಿ ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಐದು ವರ್ಷದ ಹಿಂದಿನ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಈ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ ಶಾಸಕ ಎಚ್.ಡಿ ತಮ್ಮಯ್ಯ ಕನ್ನಡ ಧ್ವಜಾರೋಹಣ ನೆರವೇರಿಸುತ್ತಾರೆ ಎಂದು ಡಾ. ಅಪ್ಸರ್ ಹಿಂದುಸ್ತಾನಿ ತಿಳಿಸಿದರು.





