ಚಿಕ್ಕಮಗಳೂರು ನಗರದಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ಆಜಾದ್ ಪಾರ್ಕ್ ವೃತ್ತದ ಬಳಿ ಬುಧವಾರ ನಡೆಸಲಾಯಿತು.
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಮತಗಳ್ಳತನ ವಿರುದ್ಧದ ಹೋರಾಟಕ್ಕೆ ಕಾಫಿನಾಡು ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಾ, ಸಹಿ ಸಂಗ್ರಹ ನಡೆಸಲಾಯಿತು.
ಇದನ್ನು ಓದಿದ್ದೀರಾ?ಚಿಕ್ಕಮಗಳೂರು l 12.5 ಕೋಟಿ ರೂ. ವೆಚ್ಚದಲ್ಲಿ 20 ಹೊಸ ಆರೋಗ್ಯ ಕ್ಷೇಮ ಕೇಂದ್ರಗಳು ಸ್ಥಾಪನೆ; ಸಚಿವ ದಿನೇಶ್ ಗುಂಡೂರಾವ್
ಈ ವೇಳೆ ಶಾಸಕ ಹೆಚ್. ಡಿ ತಮ್ಮಯ್ಯ, ಭದ್ರಾ ಕಾಡ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇನ್ನಿತರರಿದ್ದರು





