ಚಿಕ್ಕಮಗಳೂರು l ಮಹಿಳೆಗೆ ಚಪ್ಪಲಿಯಿಂದ ಹಲ್ಲೆ, ಜಾತಿ ನಿಂದನೆ ಆರೋಪ; ದೂರು ದಾಖಲು

Date:

ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಹಾಗೂ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುವೆ ಕಲ್ಮನೆ ಗ್ರಾಮದಲ್ಲಿ ಬುಧವಾರ ನಡೆದಿದೆ. ನಿಂದನೆಗೆ ಒಗೊಳಗಾದ ಮಹಿಳೆ ಸುಮಿತ್ರ (40), ಕುವೆ ಕಲ್ಮನೆ ಗ್ರಾಮಕ್ಕೆ ಕೆ ಬಿ ಮಹೇಶ್ ಎಂಬುವರನ್ನು ಮದುವೆ ಆಗಿ 15 ವರ್ಷವಾಗಿದೆ. 4 ವರ್ಷಗಳ ಹಿಂದೇ, ಹೃದಯಾಘಾತದಿಂದ ಸುಮಿತ್ರ ಅವರ ಪತಿ ಸಾವನಪ್ಪಿದ್ದಾರೆ. ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಮಹಿಳೆ, ಕೂಲಿ ಕೆಲಸವನ್ನೇ ಅವಲಂಬಿಸಿ ಜೀವನ ಕಟ್ಟಿಕೊಂಡಿದ್ದಾರೆ.

Screenshot 2025 03 25 13 29 11 61 7352322957d4404136654ef4adb64504

ಇದೇ ತಿಂಗಳು 19ರಂದು ಬೆಳಗ್ಗೆ ಹಾಲು ತರಲು ಪಕ್ಕದ ಮನೆಗೆ ತೆರಳುವಾಗ ಒಕ್ಕಲಿಗ ಸಮುದಾಯಕ್ಕೆ ಸೇರಿದ ಹೇಮಾ ಎಂಬ ಮಹಿಳೆ ಏಕಾಏಕಿ ನನ್ನನ್ನು ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ, ಚಪ್ಪಲಿಯಲ್ಲಿ ಒಡೆದಿದ್ದಾರೆ. ಹಾಗೆಯೇ, ಸಂಜೆ ಸಮಯದಲ್ಲಿ ಹೇಮಾ ಅವರ ಪತಿ ಮಂಜುನಾಥ್ ಎರಡು ಸಲ ಮನೆ ಬಳಿ ಬಂದು ಬೆದರಿಕೆ ಹಾಗೂ ಜಾತಿ ನಿಂದಿಸಿದ್ದಾರೆ, ಭಯದಿಂದ ಪಕ್ಕದವರ ಮನೆಯಲ್ಲಿ ರಾತ್ರಿ ಉಳಿದು, 20ರಂದು ಮಹಿಳೆ ಆಸ್ಪತ್ರೆ ಚಿಕಿತ್ಸೆ ಪಡೆದ, ನಂತರ 22ರಂದು ಅಖಿಲ ಕರ್ನಾಟಕ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಆಶಾ ಮತ್ತು ಸಂತೋಷ್ ಅವರ ಸಹಾಯದಿಂದ ಪೊಲೀಸ್ ಕೇಸ್ ಕೊಟ್ಟಿದ್ದೇನೆ, ಎಂದು ಸುಮಿತ್ರ ಈದಿನ.ಕಾಮ್ ಜೊತೆ ಮಾತಾಡಿದ್ದಾರೆ.

Screenshot 2025 03 25 13 31 26 95 7352322957d4404136654ef4adb64504

ಮಹಿಳೆಯರ ಮೇಲೆ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಇದು ಅಧಿಕಾರಿಗಳು ಗಮನ ಅರಿಸಬೇಕಾಗಿದೆ. ಹಾಗೆಯೇ,  ಒಕ್ಕಲಿಗ ಸಮುದಾಯಕ್ಕೆ ಸೇರಿದ ಹೇಮಾ ಅವರು ಸುಮಿತ್ರ ಎಂಬ ಮಹಿಳೆಗೆ ಚಪ್ಪಲಿಯಿಂದ ಒಡೆದು,ಜಾತಿ ನಿಂದಿಸಿ ಬೆದರಿಕೆ ಹಾಕಿದ್ದರಿಂದ, ಸುಮಿತ್ರ ಅವರು ಬಾಳೂರು ಪೊಲೀಸ್ ಠಾಣೆಯಲ್ಲಿ ಹೇಮಾ ಮತ್ತು ಮಂಜುನಾಥ್ ವಿರುದ್ಧ ಅಟ್ರಾಸಿಟಿ ಕೇಸು ದಾಖಲಿಸಲಾಗಿದೆ, ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಆಶಾ ಈದಿನ.ಕಾಮ್ ಜೊತೆ ಮಾತಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 03 25 13 40 47 88 439a3fec0400f8974d35eed09a31f914

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಲೆನಾಡಿನಲ್ಲಿ ಬೆಳ್ಳಂಬೆಳಗ್ಗೆ ವರುಣನ ಅಬ್ಬರ

ಯಾರೇ ಆಗಲಿ ತಪ್ಪು ಮಾಡಿದ್ದಾರೆ ಎಂದಾದರೆ ಶಿಕ್ಷೆ ಕೊಡಲು ಕಾನೂನು ವ್ಯವಸ್ಥೆ ಇದೆ. ಅದರಲ್ಲೂ ಮಹಿಳೆಯರ ಮೇಲೆ ಇತ್ತೀಚಿನ ದಿನಗಳಲ್ಲಿ ಜಾತಿನಿಂದನೆ, ದೌರ್ಜನ್ಯ,  ಅತ್ಯಾಚಾರ, ಎಗ್ಗಿಲ್ಲದೆ ನಡೆಯುತ್ತಿದೆ. ಇದನ್ನು ಸೂಕ್ಷ್ಮವಾಗಿ ಪರಿಗಣಿಸಿ ಇಂತಹ ಸಮಸ್ಯೆಯನ್ನು ಆಡಳಿತ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ನೊಂದವರಿಗೆ ನ್ಯಾಯ ಸಿಗಲಿ ಎಂದು ಆಶಿಸೋಣ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...