ಮಹಿಳೆಯ ಅಸ್ಥಿಪಂಜರ (Crime) ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮಲ್ಲೇನಹಳ್ಳಿ ಗ್ರಾಮದ ಪ್ರಸಿದ್ಧ ದೇವೀರಮ್ಮ ಬೆಟ್ಟದಲ್ಲಿ ನಡೆದಿದೆ.
ದೇವಿರಮ್ಮ ಬೆಟ್ಟವು ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಯಾತ್ರಾ ಸ್ಥಳವಾಗಿದೆ. ಪ್ರತಿ ವರ್ಷ ದೀಪಾವಳಿ ಹಬ್ಬದ ಮೊದಲ ದಿನದಂದು ಲಕ್ಷಾಂತರ ಭಕ್ತರು ಈ ಬೆಟ್ಟವನ್ನು ಹತ್ತಿ ದೇವಿರಮ್ಮನ ದರ್ಶನ ಪಡೆಯುತ್ತಾರೆ. ಈ ವರ್ಷದ ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಬೆಟ್ಟದ ಮಾರ್ಗವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಸ್ಥಳೀಯ ಆಡಳಿತವು ಕೈಗೊಂಡಿತ್ತು. ಈ ಕಾರ್ಯದ ವೇಳೆ, ಕೆಲವು ಕಾರ್ಮಿಕರು ರಸ್ತೆ ಬದಿಯಲ್ಲಿ ಮಹಿಳೆಯ ಶವವನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ. ಶವವು ತೀವ್ರವಾಗಿ ಕೊಳೆತ ಸ್ಥಿತಿಯಲ್ಲಿದ್ದು, ಸ್ಥಳೀಯರು ತಕ್ಷಣವೇ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಮೀಕ್ಷೆಗೆ ತೆರಳಿದ್ದ ಶಿಕ್ಷಕನಿಗೆ ನಾಯಿ ದಾಳಿ
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶವವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಶವದ ಗುರುತನ್ನು ಖಚಿತಪಡಿಸಲು ಡಿಎನ್‌ಎ ಪರೀಕ್ಷೆ ಸೇರಿದಂತೆ ವಿವಿಧ ತನಿಖಾ ವಿಧಾನಗಳನ್ನು ಅನುಸರಿಸಲಾಗುತ್ತಿದೆ. ಶವದ ಸುತ್ತಲಿನ ಪ್ರದೇಶವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ಸಾಕ್ಷ್ಯಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶವವು ಮಹಿಳೆಯದ್ದೆಂದು ದೃಢಪಟ್ಟಿದೆ ಎನ್ನಲಾಗಿದೆ.





