ಚಿಕ್ಕಮಗಳೂರು | ಕ್ಷುಲ್ಲಕ ಕಾರಣಕ್ಕೆ ವಕೀಲರ ಮೇಲೆ ಹಲ್ಲೆ; ನಾಲ್ವರ ವಿರುದ್ಧ ಪ್ರಕರಣ ದಾಖಲು

Date:

ಚಿಕ್ಕಮಗಳೂರು ನಗರದ ಬಸವನಹಳ್ಳಿ ಮಾರ್ಗವಾಗಿ ಹಾದು ಹೋಗುವ ಮುಖ್ಯ ರಸ್ತೆ ಬಳಿ ಅನ್ಯ ಗುಂಪಿನಿಂದ ವಕೀಲರ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಜಿಲ್ಲೆಯ ಕೋರ್ಟ್‌ನಲ್ಲಿ ವಕೀಲರ ವೃತ್ತಿ ನಿರ್ವಹಿಸುತ್ತಿದ್ದ ಮಂಜುನಾಥ ಪೂಜಾರಿ ಹಾಗೂ ಪೃಥ್ವಿ ಇವರಿಬ್ಬರೂ ಒಂದು ಕೇಸ್‌ಗೆ ಸಂಬಂಧಿಸಿದಂತೆ ಕೊಪ್ಪ ತಾಲೂಕು ಕೋರ್ಟ್‌ಗೆ ಹೋಗಿದ್ದರು. ಇದೇ ತಿಂಗಳು ಸೋಮವಾರ ರಾತ್ರಿ 9:45 ರಲ್ಲಿ ಇಬ್ಬರೂ ಕೂಡಿ ಬೈಕ್‌ನಲ್ಲಿ ಬರುತ್ತಿದ್ದಾಗ ಬುಲೆರೋ ಗಾಡಿಯಲ್ಲಿ ಬರುತ್ತಿದ್ದ ಚಾಲಕ ವೇಗವಾಗಿ ಇವರತ್ತಿರ ಬಂದು ಪದೇ ಪದೆ ಜೋರಾಗಿ ಗಾಡಿಯ ಹಾರ್ನ್‌ ಶಬ್ದ ಮಾಡಿದ್ದಾನೆ.

ಗಾಡಿ ಸ್ಥಳೀಯ ಕೆಆರ್‌ಎಸ್ ಆಸ್ಪತ್ರೆ ಬಳಿ ತಲುಪಿದಾಗ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ವಕೀಲರು ಪ್ರಶ್ನೆ ಮಾಡಿದಾಗ ಮಹೇಂದ್ರ ಬುಲೆರೋ ಗಾಡಿಯಿಂದ ರೋಗಿಯೊಬ್ಬರನ್ನು ಕೆಳಗಿಳಿಸುತ್ತಾರೆ. ರೋಗಿಯನ್ನು ಕಂಡ ಕೂಡಲೇ ವಕೀಲರು ಕ್ಷಮೆಯಾಚಿಸಿ ಅಲ್ಲಿಂದ ಹೊರಡುತ್ತಿರುತ್ತಾರೆ. ಆದರೆ ಗಾಡಿಯಲ್ಲಿದ್ದ ಗುಂಪೊಂದು ಕೆಳಗಿಳಿದು ವಕೀಲರಿಗೆ ಕೆಟ್ಟ, ಅವಾಚ್ಯ ಶಬ್ದಗಳನ್ನಾಡಿ ಹಲ್ಲೆ ಮಾಡುತ್ತಾರೆ. ಹಲ್ಲೆ ಮಾಡಿದವರು ಸಾರಗೋಡು ಕುಂದೂರು ಗ್ರಾಮಕ್ಕೆ ಸೇರಿದವರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಾದ ಕೂಡಲೇ ಹತ್ತಿರವಿದ್ದ ಬಸವನಹಳ್ಳಿ ಪೋಲಿಸ್ ಠಾಣೆಗೆ ದೂರು ಕೊಡಲು ವಕೀಲರು ಹೋಗುತ್ತಾರೆ. ಹಲ್ಲೆ ಮಾಡಿದವರು ರಾಜಕೀಯ ಪ್ರಭಾವಿತ ವ್ಯಕ್ತಿಗಳಾಗಿದ್ದರಿಂದ ಕೇಸು ದಾಖಲಿಸಲು ಪೊಲೀಸ್ ಇಲಾಖೆಯವರಿಗೆ ರಾಜಕೀಯ ವ್ಯಕ್ತಿಗಳಿಂದ ಕೇಸ್ ದಾಖಲಿಸಲು ಒತ್ತಡ ಎದುರಾದಾಗ ಪೊಲೀಸ್ ಇಲಾಖೆಯವರು ಕೇಸ್ ದಾಖಲಿಸಲು ಹಿಂದೆ ಸರಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಬುದ್ಧ, ಅಂಬೇಡ್ಕರ್ ಮಾರ್ಗವೇ ನಮಗೆ ಆದರ್ಶವಾಗಬೇಕು: ಸುಭಾಷ್ ಮಾಡ್ರಹಳ್ಳಿ

ಅವಾಚ್ಯ ಶಬ್ಧಗಳಿಂದ ಬೈದಿರುವುದು ಹಾಗೂ ಹಲ್ಲೆ ಮಾಡಿರುವ ದೃಶ್ಯ ಸಿ ಸಿ ಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ವಕೀಲರು ಆ ಫೂಟೇಜ್‌ ತೆಗೆಸಿ ಅದರ ಸಾಕ್ಷಿ ನೀಡಿ ಪೊಲೀಸ್ ಇಲಾಖೆಗೆ ದೂರು ದಾಖಲಿಸುತ್ತಾರೆ. ನಂತರ ಅಧಿಕಾರಿಗಳು ಮಂಗಳವಾರ ಸಂಜೆ ಕೇಸ್ ದಾಖಲಿಸಿಕೊಳ್ಳುತ್ತಾರೆ. ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆಂದು ವಕೀಲರು ಈ ದಿನ.ಕಾಮ್ ಜೊತೆ ಮಾತಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...