ಚಿಕ್ಕಮಗಳೂರು | ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಭಾರೀ ಕಾಡ್ಗಿಚ್ಚು

Date:

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮಲವಂತಿಗೆ ಗ್ರಾಮದ ಬಂಗಾರಪಲಿಕೆ ಪರಿಸರದಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಸಾಕಷ್ಟು ಅರಣ್ಯ ಪ್ರದೇಶ ಸುಟ್ಟು ಹೋಗಿದೆ.

ಬಂಗಾರಪಲಿಕೆ ಸುತ್ತಮುತ್ತಲಿನ ಕಲ್ಲು ಮತ್ತು ತಡೆಗೋಡೆ ಪ್ರದೇಶದ ಹುಲ್ಲುಗಾವಲಿನಲ್ಲಿ ಮೊದಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವಾರು ಕಿ.ಮೀ. ದೂರದ ವರೆಗೆ ವ್ಯಾಪ್ತಿಸಿದೆ. ಬಂಗಾರಪಲಿಕೆ ಸಮೀಪದಲ್ಲಿ ಅಗ್ನಿಶಾಮಕ ಘಟಕ ಇಲ್ಲದ ಕಾರಣ, 70 ಕಿ.ಮೀ ದೂರದ ಮೂಡುಬಿದಿರೆಯಿಂದ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಆದರೆ, ಅವುಗಳ ಬರುವ ವೇಳೆಗೆ ಬೆಂಕಿ ಅರಣ್ಯ ಪ್ರದೇಶದಲ್ಲಿ ವ್ಯಾಪ್ತಿಸಿಕೊಂಡಿದೆ. ನೇತ್ರಾವತಿ ಪೀಕ್‌ ಕೆಳಭಾಗದಲ್ಲಿ ಸಾವಿರಾರು ಎಕರೆ ಪ್ರದೇಶವು ಸುಟ್ಟು ಹೋಗಿದೆ.

ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್‌ಎಫ್‌ಒ ಶರ್ಮಿಷ್ಠಾ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ. ಹೆಚ್ಚಿನ ಅಪಾಯದ ಆತಂಕವಿಲ್ಲ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...