ಚಿಕ್ಕಮಗಳೂರು | ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ

Date:

ನಾಪತ್ತೆಯಾಗಿದ್ದ 33 ವರ್ಷದ KFDC ವಿಭಾಗದ ಫಾರೆಸ್ಟ್ ಗಾರ್ಡ್ ಶರತ್ ಅವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್ ನಲ್ಲಿ ಶರತ್ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ನೀಲಗಿರಿ ಪ್ಲಾಂಟೇಶನ್ ನಿಂದ 5 ಕಿಮೀ ದೂರದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಶವ ಪತ್ತೆಯಾಗಿದೆ. ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರು ನಿವಾಸಿಯಾಗಿದ್ದು, ಕಳೆದ ನಾಲ್ಕು ತಿಂಗಳ‌ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ KFDC ವಿಭಾಗದಿಂದ ಸಖರಾಯಪಟ್ಟಣ ಅರಣ್ಯ ಇಲಾಖೆಯ KFDC ವಿಭಾಗಕ್ಕೆ ವರ್ಗಾವಣೆಯಾಗಿದ್ದರು. ಸಖರಾಯಪಟ್ಟಣ ನೀಲಗಿರಿ ಪ್ಲಾಂಟೇಶನ್ ನಲ್ಲಿ ನರ್ಸರಿ ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದರು. ಇದೀಗ ಅವರ ಅನುಮಾನಾಸ್ಪದ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ನೀಲಗಿರಿ ಪ್ಲಾಂಟೇಶನ್ ನಲ್ಲಿ ಜೂನ್ 24 ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು. ಶರತ್ ಗಾಗಿ ನೂರಾರು ಅರಣ್ಯ ಇಲಾಖೆಯ ಸಿಬ್ಬಂದಿ, ಪೊಲೀಸರು ನೀಲಗಿರಿ ಪ್ಲಾಂಟೇಶನ್, ಅರಣ್ಯದಲ್ಲಿ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಶರತ್ ಬೈಕ್ ಒಂದು ಕಡೆ ಸಿಕ್ಕಿದ್ರೆ ಬಟ್ಟೆ ಪರ್ಸ್ ಒಂದೊಂದು ದಿಕ್ಕಿನಲ್ಲಿ ಪತ್ತೆಯಾಗಿತ್ತು. ಮೊಬೈಲ್ ಶರತ್ ಶವ ಸಿಕ್ಕ ಸ್ಥಳದಿಂದ 20 ಕಿಮೀ ದೂರದಲ್ಲಿ ಪತ್ತೆಯಾಗಿತ್ತು. ಇಂದು ಚಿಕ್ಕಮಗಳೂರು ಹಾಸನ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಗಳು, ಪೊಲೀಸರು ಅರಣ್ಯದಲ್ಲಿ ಹುಡುಕಾಟ ನಡೆಸುವಾಗ ಶರತ್ ಶವ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಚಿಕ್ಕಮಗಳೂರು | ಹಣ ಕೊಟ್ಟವರಿಗೆ ಮಾತ್ರ ಆದ್ಯತೆ; ಬಡವರ ಗೋಳಿಗೆ ಕಿವಿಗೊಡದ ತಾಲೂಕು ಆಡಳಿತ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...