ಚಿಕ್ಕಮಗಳೂರು l ಜನರ ಆರೋಗ್ಯ ರಕ್ಷಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದು: ಶಾಸಕ ತಮ್ಮಯ್ಯ

Date:

ಚಿಕ್ಕಮಗಳೂರು ನಗರಸಭೆ ಹಾಗೂ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ವತಿಯಿಂದ ಚಿಕ್ಕಮಗಳೂರು ನಗರಸಭೆ ಕಛೇರಿ ಸಭಾಂಗಣದಲ್ಲಿ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹೆಚ್.ಡಿ ತಮ್ಮಯ್ಯ, “ಜನರ ಆರೋಗ್ಯ ರಕ್ಷಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವವಾದುದು. ತಮ್ಮ ಕಾಯಕ ನಿಷ್ಠೆಯಿಂದ ಸ್ವಚ್ಛ ಪರಿಸರ ನಿರ್ಮಿಸುತ್ತಿರುವ ಪೌರ ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ನಮ್ಮ ಸುತ್ತಮುತ್ತಲಿನ ಪರಿಸರ ಹಾಗೂ ಮನೆ ವಾತಾವರಣ ಸ್ವಚ್ಚವಾಗಿರಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಸ್ವಚ್ಛತೆಗೆ ಆದ್ಯತೆ ನೀಡಿ ಸುತ್ತಲಿನ ಪರಿಸರವನ್ನು ಶುಚಿಯಾಗಿರಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ತಮ್ಮ ಮನೆಯ ಸ್ವಚ್ಛತೆ ಜೊತೆಗೆ ನಗರ ಹಾಗೂ ಸಮಾಜದ ಸ್ವಚ್ಛತೆಗೆ ಕಾರಣರಾಗಿರುವ ಪೌರ ಕಾರ್ಮಿಕರು ಆಧುನಿಕ ಸಮಾಜದ ಅಂಗವಾಗಿದ್ದಾರೆ ಎಂದು ತಿಳಿಸಿದರು.

Screenshot 2024 11 09 09 30 33 81 40deb401b9ffe8e1df2f1cc5ba480b12

ಸಮಾಜದಲ್ಲಿನ ಪ್ರತಿಯೊಬ್ಬ ವ್ಯಕ್ತಿಯು ತಾನು ಮಾಡುವ ಕಾರ್ಯವನ್ನು ಪ್ರೀತಿಸಬೇಕು. ಕೆಲಸಗಳಲ್ಲಿ ಮೇಲು, ಕೀಳು ಇಲ್ಲ. ಶ್ರದ್ದೆ ನಿಷ್ಠೆಯಿಂದ ಮಾಡಿದ ಪ್ರತಿಯೊಂದು ಕೆಲಸದಲ್ಲು ಯಶಸ್ಸು ಕಾಣಬಹುದು. ಸಮಾಜ ಸುಧಾರಕರು, ವಚನಕಾರರು ಕಾಯಕದ ಕುರಿತು ಹಲವಾರು ವಚನಗಳಲ್ಲಿ ವರ್ಣಿಸಿದ್ದಾರೆ. ಸೈನಿಕರು ದೇಶದ ಜನರ ಜೀವ ರಕ್ಷಿಸಲು ಶತ್ರುಗಳೆದುರು ಹೋರಾಡಿದರೆ, ಪೌರ ಕಾರ್ಮಿಕರು ಸಾರ್ವಜನಿಕರ ಆರೋಗ್ಯ ರಕ್ಷಿಸಲು ಶ್ರಮ ವಹಿಸುತ್ತಾರೆ. ಸಮಾಜದ ಉತ್ತಮ ಆರೋಗ್ಯಕ್ಕಾಗಿ ಶ್ರಮಿಸುವ ಪೌರ ಕಾರ್ಮಿಕರ ಸೇವೆಯನ್ನು ಪ್ರತಿಯೊಬ್ಬರು ಸ್ಮರಿಸಬೇಕು ಎಂದು ಕಾರ್ಯಕ್ರಮದಲ್ಲಿ ಶಾಸಕರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾ‌ರ್, “ಸರ್ಕಾರವು ವಿವಿಧ ಯೋಜನೆಗಳ ಮೂಲಕ ಪೌರ ಕಾರ್ಮಿಕರ ಆರೋಗ್ಯವನ್ನು ರಕ್ಷಿಸಲು ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸೆ ಜೊತೆಗೆ ಜೀವ ವಿಮೆಯನ್ನು ನೀಡುತ್ತದೆ. ನಿರ್ಮಿಸುತ್ತಿರುವ ಮನೆಗಳ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಬೇಕು. ಪೌರ ಕಾರ್ಮಿಕರು ನಗರದ ಪೋಷಕರಿದ್ದಂತೆ, ನಗರವು ಸುಂದರ ಹಾಗೂ ಸ್ವಚ್ಛವಾಗಿರಲು ಪೌರ ಕಾರ್ಮಿಕರ ಶ್ರಮ ಕಾರಣ. ನಗರದ ಸ್ವಾಸ್ಥ್ಯ ಕಾಪಾಡುವ ಅವರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವುದು ನಮ್ಮ ಕರ್ತವ್ಯ. ಪೌರ ಕಾರ್ಮಿಕರಿಗಾಗಿ ವಿಶೇಷ ಭತ್ಯೆ, ಪ್ರತಿವರ್ಷ ಸಂಕಷ್ಟ ಭತ್ಯೆ, ಬೆಳಗಿನ ಉಪಹಾರ ಭತ್ಯೆ, ಜೀವ ವಿಮೆಯಂತಹ ಹಲವಾರು ಯೋಜನೆಗಳನ್ನು ನೀಡಲಾಗುತ್ತಿದೆ. ಇವುಗಳನ್ನು ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ ಅವರ ಉತ್ತಮ ಭವಿಷ್ಯಕ್ಕೆ ಸಹಕರಿಸಬೇಕು” ಎಂದರು.

Screenshot 2024 11 09 09 30 47 48 40deb401b9ffe8e1df2f1cc5ba480b12

ನಗರಸಭೆ ಪೌರಾಯುಕ್ತ ಬಿ.ಸಿ ಬಸವರಾಜು ಮಾತನಾಡಿ, ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪ್ರತಿಯೊಬ್ಬ ಪೌರ ಕಾರ್ಮಿಕರಿಗೆ ರೂ.7000 ವಿಶೇಷ ಭತ್ಯೆ, ವರ್ಷ ತಲಾ ರೂ. 2000 ಸಂಕಷ್ಟ ಭತ್ಯೆ, ಹತ್ತು ಲಕ್ಷಕ್ಕೂ ಮೇಲ್ಪಟ್ಟ ಜೀವ ವಿಮೆ, ಪ್ರತಿ ದಿನ ರೂ. 30 ಉಪಾಹಾರ ಭತ್ಯೆ, ಉಚಿತ ಆರೋಗ್ಯ ತಪಾಸಣೆ, ಸ್ವಂತ ನಿವೇಶನ ಹೊಂದಿದ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಅಡಿ ಸ್ವಂತ ಮನೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ನೀಡಿ ಅವರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿದ್ದೀರಾ?ಹಾಸನ | ಮುಂದಿನ ವಾರ ಹಸೆಮಣೆ ಏರಬೇಕಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಹತ್ಯೆ

ಕಾರ್ಯಕ್ರಮದಲ್ಲಿ ನಗರ ಸಭೆ ಉಪಾಧ್ಯಕ್ಷೆ ಅನು ಮಧುಕ‌ರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಅಣ್ಣಯ್ಯ, ಪೌರ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಸಿ.ಬಿ ನಾಗರಾಜ್‌. ಪೌರ ಕಾರ್ಮಿಕರ ಸಂಘದ ಶಾಖಾ ಅಧ್ಯಕ್ಷ ಶ್ರೀನಿವಾಸ್‌ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...