ಚಿಕ್ಕಮಗಳೂರು |15ರಿಂದ 25ರವರೆಗೆ ಜನಜಾಗೃತಿ ಜಾಥಾ; ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ

Date:

ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ವತಿಯಿಂದ ಜನವರಿ 15ರಿಂದ 25ರವರೆಗೆ ಕ್ಷೇತ್ರ ಮಟ್ಟದಲ್ಲಿ “ಮಲೆನಾಡಿಗರ ಬದುಕನ್ನು ಉಳಿಸಿ” ಎಂಬ ಘೋಷವಾಕ್ಯದೊಂದಿಗೆ ಜನಜಾಗೃತಿ ಯಾತ್ರೆಯನ್ನು ಕೈಗೊಳ್ಳಲಾಗಿದೆ. ಜನ ಜಾಗೃತಿ ಮೂಡಿಸುವ ಸಲುವಾಗಿ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಉದ್ಘಾಟನೆ ಮಾಡಿದರು.

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆಕಟ್ಟೆ, ನೆಮ್ಮಾರು, ಕಿಗ್ಗಾ, ಕಲ್ಕಟ್ಟೆ ಭಾಗಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಜೊತೆಗೆ ಮನೆಮನೆಗೆ ಕರಪತ್ರ ವಿತರಣೆ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ, ಆನೆ ಮತ್ತು ಕಾಡುಪ್ರಾಣಿಗಳ ಹಾವಳಿ, ನಿವೇಶನ ಹಾಗೂ ವಾಸದ ಮನೆ ಸಮಸ್ಯೆ, ಜೀವನಾಧಾರಿತ ಸಾಗುವಳಿ ಭೂಮಿ ತೆರವು, ಎಸ್‌ಐಟಿ ರಚನೆ, ಸೊಪ್ಪಿನ ಬೆಟ್ಟ, ಮಲೆನಾಡಿನಲ್ಲಿ ಪರ್ಯಾಯ ಬೆಳೆ, ಸೆಕ್ಷನ್ 4(1), ಸೆಕ್ಷನ್ 17, ಡೀಮ್ಡ್ ಅರಣ್ಯ ಕಾಯ್ದೆ, ಕಾರ್ಮಿಕರು ಮತ್ತು ವರ್ತಕರ ಸಮಸ್ಯೆಗಳು, ಕೆರೆಕಟ್ಟೆ ಹಾಗೂ ಭದ್ರ ಹಿನ್ನೀರಿನ ಸಂತ್ರಸ್ತರಿಗೆ ನ್ಯಾಯ, ಭದ್ರ ಹುಲಿ ಯೋಜನೆಯ ಬಫರ್ ಝೋನ್ ಮತ್ತು ಪರಿಸರ ಸೂಕ್ಷ್ಮ ವಲಯ,

Screenshot 2026 01 16 22 28 39 53 7352322957d4404136654ef4adb64504

ಹಳದಿ ಎಲೆ, ಕೊಳೆ ರೋಗ, ಎಲೆ ಚುಕ್ಕಿ ರೋಗ, ಕೃಷಿ ವಲಯದಲ್ಲಿ ಸರ್ಫೇಸಿ ಕಾಯ್ದೆ, ಬೆಳೆ ವಿಮೆ ಸಮಸ್ಯೆ, ಪಟ್ಟಣಗಳಿಗೆ ಯುವಕರ ವಲಸೆ ಸೇರಿದಂತೆ ಹಲವಾರು ಪ್ರಸ್ತುತ ಹಾಗೂ ಭವಿಷ್ಯದ ಆತಂಕಗಳ ಕುರಿತು ರೈತರು, ಕಾರ್ಮಿಕರು ಮತ್ತು ನಾಗರಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಸಮಿತಿಯ ಮುಖಂಡರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಸರ ಸಂರಕ್ಷಣೆ ಅಗತ್ಯವಾದರೂ, ಅದರ ಹೆಸರಿನಲ್ಲಿ ಸ್ಥಳೀಯ ನೆಲವಾಸಿಗಳ ಬದುಕು ಕಸಿದುಕೊಳ್ಳಬಾರದು. ಅವೈಜ್ಞಾನಿಕವಾಗಿ ಜಾರಿಯಾಗುತ್ತಿರುವ ಹಲವು ಯೋಜನೆಗಳಿಂದ ಮಲೆನಾಡಿನ ರೈತರು ಮತ್ತು ಕಾರ್ಮಿಕರ ಹಕ್ಕುಗಳಿಂದ ವಂಚಿತರಗಿದ್ದಾರೆ. ಯಾವುದೇ ರಾಜಕೀಯ ಉದ್ದೇಶವಿಲ್ಲದೆ ಮಲೆನಾಡಿಗರ ಬದುಕನ್ನು ಉಳಿಸುವ ನಿಟ್ಟಿನಲ್ಲಿ ಈ ಯಾತ್ರೆ ಆರಂಭಿಸಲಾಗಿದೆ. ಹತ್ತಾರು ಮಾರಕ ಅರಣ್ಯ ಕಾಯ್ದೆಗಳು ಹಾಗೂ ಅವುಗಳ ಅವೈಜ್ಞಾನಿಕ ಅನುಷ್ಠಾನದಿಂದ ನಮ್ಮ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಸೆಕ್ಷನ್ 4ನ್ನು 17ಕ್ಕೆ ಪರಿವರ್ತಿಸುವಾಗ ನೈಸರ್ಗಿಕ ನ್ಯಾಯ ಪಾಲನೆ ಆಗದೆ ರೈತರು ಮತ್ತು ಕಾರ್ಮಿಕರನ್ನು ವಂಚಿಸಲಾಗುತ್ತಿದೆ. ಎಸ್‌ಐಟಿ ರಚನೆಯಿಂದ ಈಗಾಗಲೇ ದಾಖಲೆ ಹೊಂದಿರುವ ಭೂಮಿಗೂ ಕುತ್ತು ಬರುವ ಆತಂಕವಿದೆ. ಕಾಡಾನೆ ದಾಳಿಯಿಂದ ರೈತರು ಕೃಷಿ ತೋಟಕ್ಕೆ ಹೋಗಲು ಹೆದರುವ ಪರಿಸ್ಥಿತಿ ಎದುರಾಗಿದೆ ಎಂದು ರೈತ, ಕಾರ್ಮಿಕ ನಾಗರೀಕ ಸಮಿತಿಯ ಮುಖಂಡರು ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಡಿಸಿಸಿ ಬ್ಯಾಂಕ್ ಚುನಾವಣೆ; ನಿಷೇಧಾಜ್ಞೆ ಜಾರಿ

ಈ ಸಂದರ್ಭದಲ್ಲಿ ಸಮಿತಿಯ ಆದರ್ಶ, ಅಶ್ವಿನ್, ಸುಭಾಷ್, ಕಿರಣ್, ಸಚಿನ್, ಸಂತೋಷ್, ರವಿ, ಅನಿರುದ್ದ್, ಮಂಜುನಾಥ್, ಮಂಜುನಾಥ್ ಯಡದಾಳ್, ನೂತನ್ ಕುಮಾರ್, ರಾಜಕುಮಾರ್ ಹೆಗ್ಡೆ, ಶ್ರೀಧರ್, ಸಂತೃಪ್ತ್, ಆಶಿಕ್, ದಿವೀರ್ ಮಲ್ನಾಡ್, ಸುಭಾಷ್ ಚಂದ್ರ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...