ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಸೋಮವಾರ ಹಲವೆಡೆ ಮಳೆಯಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮಾರ್ಚ್ 18ರ ವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ. ಮಾರ್ಚ್ 19ರಿಂದ 21ರವರೆಗೆ ವಾತಾವರಣವು ಭಾಗಶಃ ಮೋಡದಿಂದ ಕೂಡಿದ್ದು, ಹಗುರ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ಇದನ್ನೂ ಓದಿದ್ದೀರಾ?ಹಾಸನ | ಫ್ಲಿಪ್‌ಕಾರ್ಟ್, ಅಮೇಜಾನ್ ಕಛೇರಿ ಎದುರು ಬೃಹತ್ ಪ್ರತಿಭಟನೆ ಎಚ್ಚರಿಕೆ; ಕೆಪಿಆರ್‌ಎಸ್
ಈ ಅವಧಿಯಲ್ಲಿ ಗರಿಷ್ಠ ತಾಪಮಾನವು 29°C ಇರಲಿದ್ದು, ಕನಿಷ್ಠ ತಾಪಮಾನವು 16°C ವರೆಗೆ ದಾಖಲಾಗುವ ಮೂಲಕ ವಾತಾವರಣವು ತಂಪಾಗಿರಲಿದೆ. ಮಾರ್ಚ್ 22ರ ನಂತರ ಜಿಲ್ಲೆಯಲ್ಲಿ ಮತ್ತೆ ಬಿಸಿಲಿನ ಝಳ ಹೆಚ್ಚಾಗಲಿದ್ದು, ತಾಪಮಾನವು 31°C ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.





