ಚಿಕ್ಕಮಗಳೂರು | ಅಕ್ರಮವಾಗಿ 27 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ: ಬಿ ಆರ್ ಭಾಸ್ಕರ್ ಪ್ರಸಾದ್

Date:

ಒತ್ತುವರಿಯಾಗಿರುವ 27,000 ಎಕರೆ ಅರಣ್ಯ ಭೂಮಿ ಹಾಗೂ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಿ, ಅಕ್ರಮ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಆರ್ ಭಾಸ್ಕರ್ ಪ್ರಸಾದ್ ಆಗ್ರಹಿಸಿದರು.

ಚಿಕ್ಕಮಗಳೂರು ನಗರದಲ್ಲಿ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದಿಂದ ನಡೆಸಿದ ನಾಯಕರ ಸಭೆಯಲ್ಲಿ ಮಾತನಾಡಿ, “ಜಿಲ್ಲೆಯಾದ್ಯಂತ ಒಟ್ಟು 27,000 ಎಕರೆಗೂ ಹೆಚ್ಚು ಅರಣ್ಯ, ಸ್ಮಶಾನ, ಗೋಮಾಳ, ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದು, ಅರಣ್ಯ ಒತ್ತುವರಿ ತೆರವಿಗೆ ರಾಜ್ಯ ಅರಣ್ಯ ಸಚಿವರು ಈ ಹಿಂದೆ ಖಡಕ್ ಸೂಚನೆ ನೀಡಿದ್ದರು ಹಾಗೂ ಸುಪ್ರೀಂ ಕೋರ್ಟ್‌ನ ಹಸಿರು ಪೀಠವು ಮೀಸಲು ಅರಣ್ಯ ಒತ್ತುವರಿ ತೆರವುಗೊಳಿಸಬೇಕು ಇಲ್ಲದೆ ಹೋದರೆ ಸಂಬಂಧಿಸಿದ ಅರಣ್ಯಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಹಲವು ಪ್ರಕರಣಗಳಲ್ಲಿ ಪುನರುಚ್ಚರಿಸಿಸುತ್ತಲೇ ಬಂದಿದೆ” ಎಂದರು.

“ನ್ಯಾಯಲಯಗಳಲ್ಲಿ ಅರಣ್ಯ ಇಲಾಖೆಯ ಪರವಾಗಿಯೇ ತೀರ್ಪುಗಳು ಬಂದಿದೆ. ಸರ್ಕಾರಿ ಜಮೀನುಗಳ ಒತ್ತುವರಿ ತೆರವುಗೊಳಿಸಿದ ಪ್ರಕರಣದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾನೂನುಬದ್ಧಗೊಳಿಸಿರುವ ಅಕ್ರಮ ಒತ್ತುವರಿದಾರರ ವಿರುದ್ಧ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಪ್ರಕರಣದಲ್ಲಿ ಅಕ್ರಮ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಜೀವನೋಪಾಯಕ್ಕಾಗಿ ಅಲ್ಪಸ್ವಲ್ಪ ಒತ್ತುವರಿ ಮಾಡಿರುವವರನ್ನು ಬಿಡಿಸುವ ಮುನ್ನ ನೂರಾರು ಎಕರೆಗೂ ಹೆಚ್ಚು ಅರಣ್ಯ ಒತ್ತುವರಿ ಮಾಡಿರುವ ಪ್ರಭಾವಿಗಳನ್ನು ಬಿಡಿಸುವ ಕೆಲಸ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಂಜಾರ ಸಂಸ್ಕೃತಿ, ಕಲೆಗೆ ರಾಷ್ಟ್ರೀಯ ಮಹತ್ವವಿದೆ: ಡಾ. ಎ ಆರ್ ಗೋವಿಂದಸ್ವಾಮಿ

ಪಕ್ಷದ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಮೀಲ್ ಅಹ್ಮದ, ಮುಬಾರಕ್, ಜಮೀಲ್ ಖಾನ್, ಅಂಗಡಿ ಚಂದ್ರು, ಮೊಹಮ್ಮದ್ ಜೀಲಾನ್, ಆಫ್ರೀದ್ ಸೇರಿದಂತೆ ಕಾರ್ಯಕರ್ತರು ಹಾಗೂ ಸ್ಥಳೀಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...