ಚಿಕ್ಕಮಗಳೂರು | ಪುರಸಭೆ ಅಧಿಕಾರಿಗಳ ಏಕಾಏಕಿ ದಾಳಿ; ಪ್ಲಾಸ್ಟಿಕ್ ಬಳಸುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ

Date:

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಪುರಸಭೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಶನಿವಾರ ಏಕಾಏಕಿ ದಾಳಿ ಮಾಡಿದ್ದು, ಪ್ಲಾಸ್ಟಿಕ್ ಬಳಸುತ್ತಿರುವ ಅಂಗಡಿಗಳ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

ತರೀಕೆರೆ ತಾಲೂಕಿನ ಪುರಸಭಾ ಸಿಬ್ಬಂದಿ ಅಂಗಡಿ, ಹೋಟೆಲ್, ಮದ್ಯದ ಅಂಗಡಿಗಳ ಮೇಲೆ ಏಕಾಏಕಿ ದಾಳಿ ಮಾಡಿದ್ದು, ತಪಾಸಣೆ ಮಾಡಿದಾಗ ಸುಮಾರು 40 ಕೆಜಿ ಪ್ಲಾಸ್ಟಿಕ್ ಚೀಲಗಳು, ಉತ್ಪನ್ನಗಳನ್ನು ಅಮಾನತು ಮಾಡಿ, ಸುಮಾರು ₹32,000 ದಂಡ ವಸೂಲಿ ಮಾಡಿರುವುದಾಗಿ ಪುರಸಭೆ ಅಧ್ಯಕ್ಷ ವಸಂತ ಕುಮಾರ್ ಕವಾಲಿ ತಿಳಿಸಿದರು.

“ಪ್ಲಾಸ್ಟಿಕ್ ಬಳಸುವುದರಿಂದ ಪರಿಸರ ಹಾಳಾಗುತ್ತಿದೆ ಪ್ರಾಣಿ ಸಂಕುಲಗಳು ಸಂಕಷ್ಟದಲ್ಲಿ ಸಿಲುಕುತ್ತಿವೆ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ. ಹಾಗಾಗಿ ತರೀಕೆರೆ ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ಮಾಡುತ್ತೇವೆ. ಹಾಗೆಯೇ ಸರ್ಕಾರದ ಆದೇಶದಂತೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು, ಅಂಗಡಿ ಮುಗ್ಗಟ್ಟುಗಳು ಮತ್ತು ಹೋಟೆಲ್ ಮಾಲೀಕರು ಹಾಗೂ ಮದ್ಯದ ಅಂಗಡಿಗಳ ಮಾಲೀಕರು ಸಹಕರಿಸಬೇಕು” ಎಂದು ಪುರಸಭೆ ನಾಮ ನಿರ್ದೇಶನ ಸದಸ್ಯ ಆದಿಲ್ ಪಾಷ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2024 12 08 16 32 01 02 40deb401b9ffe8e1df2f1cc5ba480b12

ಪುರಸಭೆ ಮುಖ್ಯ ಅಧಿಕಾರಿ ಹೆಚ್ ಪ್ರಶಾಂತ್‌ ಮಾತನಾಡಿ, “ಸರ್ಕಾರದ ಆದೇಶದಂತೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಅಂಗಡಿ ಮುಗ್ಗಟ್ಟುಗಳು ಮತ್ತು ಹೋಟೆಲ್ ಮಾಲೀಕರು ಹಾಗೂ ಮದ್ಯದ ಅಂಗಡಿಗಳ ಮಾಲೀಕರು ಸಹಕರಿಸಬೇಕು ತಪ್ಪಿದಲ್ಲಿ ನಿಮಗೆ ನೀಡಿರುವ ಪರವಾನಗಿಗಳನ್ನು ರದ್ದು ಮಾಡಲಾಗುವುದು” ಎಂದು ಎಚ್ಚರಿಸಿದರು.

ಪುರಸಭಾ ಪರಿಸರ ಅಭಿಯಂತರ ತಸ್ಲೀಮ್ ಮಾತನಾಡಿ, “ಸ್ವಚ್ಛತೆ ಮತ್ತು ಪರಿಸರದ ಬಗ್ಗೆ ಗಮನ ನೀಡುತ್ತಿದ್ದೇವೆ” ಎಂದು ಹೇಳಿದರು.  

ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು | ಮಕ್ಕಳ ಎದುರೇ ಗೃಹಿಣಿ ಹತ್ಯೆ; ಆರೋಪಿ ಪ್ರಿಯಕರನಿಗಾಗಿ ಹುಡುಕಾಟ

“ಪ್ಲಾಸ್ಟಿಕ್ ವಸ್ತುಗಳು ಸಾವಿರಾರು ವರ್ಷಗಳ ಕಾಲ ಕೊಳೆಯುವುದಿಲ್ಲ. ಭೂಮಿಯಲ್ಲಿ ಹಾಗೇ ಉಳಿದು ಭೂಮಿಯ ಫಲವತ್ತತೆಯನ್ನು ಹಾಳುಮಾಡುತ್ತದೆ. ಇದರಿಂದ ಭೂಮಿಯ ಮೇಲೆ ವ್ಯತಿರಿಕ್ತವಾದ ಪರಿಣಾಮಗಳು ಬೀರುತ್ತಿವೆ” ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಮುಖಂಡ‌ ಇಮ್ರಾನ್ ಅಹಮದ್ ಬೇಗ್ ತಿಳಿಸಿದರು.

ಈ ವೇಳೆ ಪುರಸಭೆ ಅಧ್ಯಕ್ಷರು, ಸದಸ್ಯರು, ಅಂಗಡಿ ಮಾಲೀಕರು, ಸ್ಥಳೀಯರು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...