ಚಿಕ್ಕಮಗಳೂರು ಪೊಲೀಸ್ ದೌರ್ಜನ್ಯ: ವಕೀಲರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

Date:

ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ವಕೀಲನೋರ್ವನ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ ಮತ್ತು ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ನಾಲ್ವರು ವಕೀಲರ ಮೇಲೆ ದಾಖಲಾಗಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಚಿಕ್ಕಮಗಳೂರು ಟೌನ್‌ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್‌ ರದ್ದುಪಡಿಸುವಂತೆ ಕೋರಿ ಚಿಕ್ಕಮಗಳೂರಿನ ವಕೀಲರಾದ ಡಿ ಬಿ ಸುಜೇಂದ್ರ, ಎ ಕೆ ಭುವನೇಶ್‌, ಕೆ ಬಿ ನಂದೀಶ್‌ ಮತ್ತು ಎಚ್‌ ಎಂ ಸುಧಾಕರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಚಿಕ್ಕಮಗಳೂರಿನಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿರುವ ವಕೀಲ ಎನ್‌ ಟಿ ಪ್ರೀತಮ್‌ ಅವರ ವಿರುದ್ಧ ಪೊಲೀಸರು ದಾಖಲಿಸಿಕೊಂಡಿರುವ ಈ ಪ್ರತಿ ದೂರಿಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಟೌನ್‌ ಠಾಣಾ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿರುವ ಹೈಕೋರ್ಟ್‌, ಎಫ್‌ಐಆರ್‌ಗೆ ತಡೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ವಕೀಲ ಕೆ ಎನ್‌ ಫಣೀಂದ್ರ ಅವರು, “ವಕೀಲ ಪ್ರೀತಮ್‌ ಅವರ ಮೇಲೆ ಹಲ್ಲೆಯಾದ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠವು ಸ್ವಯಂಪ್ರೇರಿತವಾಗಿ ಪರಿಗಣಿಸಿ, ವಿಚಾರಣೆ ನಡೆಸಿದೆ. ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಬಳಿಕ ಪೊಲೀಸರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಇದಾದ ನಂತರ ಪೊಲೀಸರು ಡಿಸೆಂಬರ್‌ 3ರಂದು ತಡರಾತ್ರಿ 1.45ಕ್ಕೆ ಅರ್ಜಿದಾರರು ಸೇರಿ ಚಿಕ್ಕಮಗಳೂರು ವಕೀಲರ ಸಂಘದ ಪದಾಧಿಕಾರಿಗಳ ವಿರುದ್ಧ ಪ್ರತ್ಯೇಕವಾಗಿ ಮೂರು ಎಫ್‌ಐಆರ್‌ ದಾಖಲಿಸಿದ್ದಾರೆ. ಪ್ರೀತಮ್‌ ಪ್ರಕರಣಕ್ಕೆ ಪ್ರತಿಯಾಗಿ ದುರುದ್ದೇಶದಿಂದ ಈ ಪ್ರಕರಣಗಳನ್ನು ದಾಖಲಿಸಲಾಗಿದೆ.  ಹಾಗಾಗಿ, ಇವುಗಳಿಗೆ ತಡೆ ನೀಡಬೇಕು” ಎಂದು ಕೋರಿದರು.

ರಾಜ್ಯ ಸರ್ಕಾರ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ಎ ಬೆಳ್ಳಿಯಪ್ಪ ಅವರು “ನಾವು ದುರುದ್ದೇಶಪೂರಿತ ಕ್ರಮ ಕೈಗೊಳ್ಳುವುದಿಲ್ಲ” ಎಂದರು.

ಚಿಕ್ಕಮಗಳೂರು ಟೌನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2023ರ ನವೆಂಬರ್‌ 30ರಂದು ಸಂಜೆ 6.30ಕ್ಕೆ ವಕೀಲ ಎನ್‌ ಟಿ ಪ್ರೀತಮ್‌ ಅವರು ಬೈಕ್‌ ನಿಲುಗಡೆ ಮಾಡಿದ್ದರು. ಆಗ ಬೈಕ್‌ ಕೀ ಎತ್ತಿಕೊಂಡಿದ್ದ ಪೊಲೀಸ್‌ ಅಧಿಕಾರಿಯು ನೀವು ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ದೀರಿ ಎಂದು ತಿಳಿಸಿದ್ದರು. ಅದಕ್ಕೆ ವಕೀಲ ಪ್ರೀತಮ್‌ ದಂಡ ಪಾವತಿಸುವುದಾಗಿ ಹೇಳಿದ್ದರು. ಅದಕ್ಕೆ ಒಪ್ಪದ ಪೊಲೀಸರು ಪ್ರೀತಮ್‌ ಅವರನ್ನು ಠಾಣೆಗೆ ಕರೆದೊಯ್ದು ಹಾಕಿ ಹಾಗೂ ಕ್ರಿಕೆಟ್‌ ಬ್ಯಾಟಿನಿಂದ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರೂ ಪ್ರೀತಮ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಮಾಹಿತಿ ತಿಳಿದ ತಕ್ಷಣ ವಕೀಲರು ಠಾಣೆಗೆ ತೆರಳಿ ಪ್ರತಿಭಟನೆ ನಡೆಸಿ, ಪೊಲೀಸರ ವರ್ತನೆ ಖಂಡಿಸಿದ್ದಾರೆ. ಗಾಯಗೊಂಡ ಪ್ರೀತಮ್‌ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಅದಾಗ್ಯೂ, ಅರ್ಜಿದಾರ ವಕೀಲರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಪ್ರೀತಮ್‌ ಅವರ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದ ಪೊಲೀಸ್‌ ಅಧಿಕಾರಿ ಎ ಎಂ ಸತೀಶ್‌ ಅವರ ಮೊಬೈಲ್‌ ಕಿತ್ತುಕೊಂಡು, ಹಲ್ಲೆ ನಡೆಸಲು ಯತ್ನಿಸಿದ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ, ಜೀವ ಬೆದರಿಕೆ ಒಡ್ಡಿದ ಮತ್ತು ಸಾರ್ವಜನಿಕ ಶಾಂತಿಭಂಗ ಉಂಟು ಮಾಡಿದ ಆರೋಪ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಇದನ್ನು ಓದಿದ್ದೀರಾ? ವಿಡಿಯೊ ಕಾನ್ಫರೆನ್ಸ್‌ನಲ್ಲಿ ಅನುಚಿತ ವರ್ತನೆ: ಲೈವ್‌ ಸ್ಟ್ರೀಮಿಂಗ್‌ಗೆ ನಿರ್ಬಂಧ ಹೇರಿದ ಹೈಕೋರ್ಟ್‌

ಅರ್ಜಿದಾರ ವಕೀಲರ ವಿರುದ್ದ ಸುಳ್ಳು ಆರೋಪ ಮಾಡಲಾಗಿದೆ. ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ದುರುದ್ದೇಶದಿಂದ ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ ದಾಖಲಿಸಲಾಗಿದೆ. ಇವುಗಳಲ್ಲಿ ಚಿಕ್ಕಮಗಳೂರು ವಕೀಲರ ಸಂಘದ ಪದಾಧಿಕಾರಿಗಳನ್ನೂ ಆರೋಪಿಗಳನ್ನಾಗಿಸಲಾಗಿದೆ. ಪೊಲೀಸ್‌ ಅಧಿಕಾರಿಗಳು ಕಾನೂನನ್ನು ತಮ್ಮ ಕೈಗೆ ಎತ್ತಿಕೊಂಡಿದ್ದಾರೆ. ಆದ್ದರಿಂದ ಎಫ್ಐಆರ್‌ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ವಕೀಲರಾದ ಡಿ ಬಿ ಸುಜೇಂದ್ರ, ಎ ಕೆ ಭುವನೇಶ್‌, ಕೆ ಬಿ ನಂದೀಶ್‌ ಮತ್ತು ಎಚ್‌ ಎಂ ಸುಧಾಕರ್‌ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 353, 504, 506 ಜೊತೆಗೆ 149 ಅಡಿ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...