ಚಿಕ್ಕಮಗಳೂರು: ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Date:

ಮನೆ ಕಳ್ಳತನಗಳು ಹಾಗೂ ಎಪಿಎಂಸಿ ಆವರಣದ ತೆಂಗಿನಕಾಯಿ ಕಳ್ಳತನ ಪ್ರಕರಣ ಕುರಿತು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.

ವೇಣುಗೋಪಾಲ ಸ್ವಾಮಿ ದೇವಸ್ಥಾನದ ಬಳಿ ಮಾರ್ಚ್ 19ರಂದು ಮಂಜುಳ ಎಂಬುವರ ಮನೆಯಲ್ಲಿ 43 ಗ್ರಾಂ ಚಿನ್ನಾಭರಣ ಮತ್ತು ₹10 ಸಾವಿರ ನಗದು ಹಾಗೂ ಜುಲೈ 1ರಂದು ಪಾರ್ವತಮ್ಮ ಅವರ ಮನೆಯಿಂದ 51 ಗ್ರಾಂ ಚಿನ್ನಾಭರಣ, 100 ಗ್ರಾಂ ಬೆಳ್ಳಿ ಹಾಗೂ ₹6 ಸಾವಿರ ನಗದು ಕಳವಾಗಿದ್ದ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಬಂಧಿತ ಆರೋಪಿ ಸಚಿನ್ ಡಿಸೋಜನಿಂದ 71 ಗ್ರಾಂ ಚಿನ್ನಾಭರಣ, 100 ಗ್ರಾಂ ಬೆಳ್ಳಿ, ₹25 ಸಾವಿರ ಮೌಲ್ಯದ ವಸ್ತುಗಳು ಹಾಗೂ ಕಳವು ಮಾಡಲು ಬಳಸಿದ ಬಜಾಜ್ ಪಲ್ಸರ್ ಬೈಕ್ ವಶ,  ಒಟ್ಟು ₹7.25 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಪಿಎಂಸಿ ಆವರಣದಲ್ಲಿ ಕಳೆದ 3 ತಿಂಗಳ ಅವಧಿಯಲ್ಲಿ 34 ಚೀಲಗಳಲ್ಲಿ ಒಟ್ಟು 2,500 ತೆಂಗಿನಕಾಯಿಗಳನ್ನು ಕಳವು ಮಾಡಿದ್ದ ಮಹಮ್ಮದ್ ನೌಷದ್, ಹಾಗೂ ಗಣೇಶ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ₹1.10 ಲಕ್ಷ ಮೌಲ್ಯದ ನಗದು ಹಾಗೂ ₹2 ಲಕ್ಷ ಮೌಲ್ಯದ ಬಜಾಜ್ ಮಾಕ್ಸಿಮಾ ಆಟೋವನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪೊಲೀಸ್ ದೌರ್ಜನ್ಯದಿಂದ ಯುವಕ ಆತ್ಮಹತ್ಯೆ: ನ್ಯಾಯ ಸಿಗದಿದ್ದರೇ ಬೃಹತ್ ಪ್ರತಿಭಟನೆ; ದಸಂಸ ಎಚ್ಚರಿಕೆ

ಈ ಘಟನೆ ಕುರಿತು ಬಸವನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಂಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...