ಚಿಕ್ಕಮಗಳೂರು | ಕಾಡಾನೆ ದಾಳಿಗೆ ಇಬ್ಬರು ಬಲಿ: ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಕೆ ಎಲ್‌ ಅಶೋಕ್ ತೀವ್ರ ಆಕ್ರೋಶ

Date:

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಜನಶಕ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಲ್‌ ಅಶೋಕ್ ಅವರು ಅರಣ್ಯ ಇಲಾಖೆ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಇವರು, “ಮಲೆನಾಡಿನಲ್ಲಿ ಕಾಡಾನೆ ದಾಳಿಯಿಂದ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಮೊದಲೆಲ್ಲ ಮಲೆನಾಡಿನ ಭಾಗದಲ್ಲಿ ಕಾಡಾನೆ ಎನ್ನುವುದೇ ಇರಲಿಲ್ಲ. ಇತ್ತೀಚಿಗೆ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಇದರಿಂದ ಸುತ್ತಮುತ್ತಲಿನ ಜನರು ಓಡಾಡಲು ಭಯ ಪಡುತ್ತಿದ್ದಾರೆ” ಎಂದು ಹೇಳಿದರು.

“ಕಾಡಾನೆ ಹಾವಳಿ ಕುರಿತು ಅರಣ್ಯ ಇಲಾಖೆ ಗಮನಕ್ಕೆ ತಂದರೂ ಕೂಡ ಕಾಡಾನೆ ಹಿಡಿದು ಮತ್ತೆ ಈ ಭಾಗಕ್ಕೇ ಬಿಡುತ್ತಿರುವುದರಿಂದ ಮತ್ತಷ್ಟು ಸಾವುಗಳು ಸಂಭವಿಸುತ್ತಿವೆ. ಹಾಗೆಯೇ, ಇಂದು ಬೆಳಿಗ್ಗೆ ಎರಡು ಸಾವು ಸಂಭವಿಸಿದ್ದು, ಅರಣ್ಯ ಇಲಾಖೆ ಮತ್ತು ಅರಣ್ಯ ಸಚಿವರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಕಾಡಾನೆ ದಾಳಿಗೆ ಇಬ್ಬರು ಸಾವು

“ಮಲೆನಾಡಿನಲ್ಲಿ ಕಾಡಾನೆ ದಾಳಿಯಿಂದ ಹೆಚ್ಚು ಸಾವು ಸಂಭವಿಸುತ್ತಿವೆ. ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಕುಟುಂಬದವರಿಗೆ ಪರಿಹಾರ ಕೊಟ್ಟು ಕೈ ತೊಳೆದುಕೊಳ್ಳುವ ಅರಣ್ಯ ಇಲಾಖೆ, ಇಂತಹ ಘಟನೆ ಬಗ್ಗೆ ಮುಂಜಾಗರುಕತೆ ವಹಿಸಿ ಕಾಡಾನೆ ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸಬೇಕು. ಹಾಗೆಯೇ, ಅರಣ್ಯ ಇಲಾಖೆ ಹಾಗೂ ಅರಣ್ಯ ಸಚಿವರು ಕೂಡಲೇ ಗಮನ ವಹಿಸಿ ಕ್ರಮಕೈಗೊಳ್ಳಬೇಕು” ಎಂದು ಮಹಿಳಾ ಮುನ್ನಡೆ ರಾಧಾ ಹಾಗಲಗಂಚಿ ಈ ದಿನ.ಕಾಮ್‌ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...