ಶ್ರೀಗಂಧ ಸಾಗಿಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹಂಡುಗುಳಿ ಸಮೀಪದ ನವಗ್ರಾಮದ ವಲಯ ಅರಣ್ಯದಲ್ಲಿ ನಡೆದಿದೆ.
ಪ್ರೆಸ್’ ಎಂದು ಬರೆಸಿದ್ದ ಬೈಕ್‌ನಲ್ಲಿ ಶ್ರೀಗಂಧವನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ಆರೋಪಿಗಳಾದ ಹಾಸನದಿಂದ ಪ್ರಕಟವಾಗುವ ಸ್ಥಳೀಯ ಪತ್ರಿಕೆಯ ವರದಿಗಾರ ಹಂಡಗುಳಿ ಮೂಲದ, ಪಟ್ಟಣ ನಿವಾಸಿ ಪತ್ರಕರ್ತ ಎಚ್.ಆರ್.ಮನ್ಸೂರ್ ಹಾಗೂ ಹ್ಯಾಂಡ್ ಪೋಸ್ಟ್ ಬಳಿಯ ನಿವಾಸಿ ಎಂ.ಕೆ. ಯೂಸೂಫ್ ಬಂಧಿತರು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಗಂಧ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳ ತಂಡ, ಮೂಡಿಗೆರೆ ಶಾಖೆ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಸುಜುಕಿ ಕಂಪನಿಯ ಮೋಟಾರ್ ಬೈಕ್ (ನಂ:KA-18-ED-5486) ನಲ್ಲಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿರುವಾಗ ಬೈಕನ್ನು ಬೆನ್ನಟ್ಟಿ ಹಿಡಿದು ಪರಿಶೀಲಿಸಿದಾಗ, ಶ್ರೀಗಂಧದ 8 ತುಂಡುಗಳು ಪತ್ತೆಯಾಗಿದವು. ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ಶ್ರೀಗಂಧವನ್ನೂ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಆರೋಪಿಗಳನ್ನು ಗುರುವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕ್ರೇನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಮಹಿಳೆ ಸಾವು
ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಜಿ.ಮಂಜುನಾಥ್, ಡಿಆರ್‌ಎಫ್‌ಒ ಅಶ್ವತ್ಥ್, ಸಿಬ್ಬಂದಿ ಜೆ.ಜಿ.ಉಮೇಶ್, ಎ.ಎಸ್.ಸುರೇಶ್, ಸುಮಂತ್ ನವರಾಜ್, ಭಾಗವಹಿಸಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರೆಂದು ತಿಳಿದು ಬಂದಿದೆ.





