ಚಿಕ್ಕಮಗಳೂರು | ಪ್ರಜ್ಞಾಹೀನನಾದ ಪ್ರಯಾಣಿಕ: ಬಸ್ಸನ್ನೇ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ ಚಾಲಕ

Date:

ಚಲಿಸುತ್ತಿರುವ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಪ್ರಜ್ಞಾಹೀನರಾಗಿ ಅಸ್ವಸ್ಥಗೊಂಡ ಬಳಿಕ ಬಸ್ಸನ್ನೇ ಚಾಲಕ ಆಸ್ಪತ್ರೆಗೆ ಸಾಗಿಸುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.

ಗುರುವಾರ ಮೂಕಾಂಬಿಕ ಹೆಸರಿನ ಖಾಸಗಿ ಬಸ್ಸು ಬುಕ್ಕಡಿಬೈಲಿನಿಂದ ತ್ಯಾವಣ ಮಾರ್ಗವಾಗಿ ಶೃಂಗೇರಿಗೆ ಸಂಚರಿಸುತ್ತಿತ್ತು. ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಜ್ಞಾನತಪ್ಪಿ ಬಸ್ಸಿನಲ್ಲಿ ಗಂಭೀರವಾಗಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಬಸ್ಸನ್ನು ನಿಲ್ಲಿಸಿ ಆ್ಯಂಬುಲೆನ್ಸ್‌ಗೆ ಕರೆ ಮಾಡಲು ಪ್ರಯತ್ನಿಸಿದರಾದರೂ, ನೆಟ್ಟರ್ಕ್ ಸಿಗದ ಕಾರಣ ಕರೆ ಹೋಗಿಲ್ಲ. ಈ ವೇಳೆ ಸಮಯ ವ್ಯರ್ಥ ಮಾಡದ ಬಸ್ಸಿನ ಚಾಲಕರಾದ ಸುರೇಶ್ ಹಾಗೂ ನಿರ್ವಾಹಕ ಶಾಕಿರ್‌ ಅವರು ಸಮೀಪವಿರುವ ಶೃಂಗೇರಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆ ಮೂಲಕ ಪ್ರಯಾಣಿಕನ ಜೀವ ಉಳಿಸಿದ್ದಾರೆ.

“ದುರ್ಗಾ ದೇವಸ್ಥಾನದಿಂದ ತ್ಯಾವಣ ಕಡೆ ಹೋಗುವಾಗ ವ್ಯಕ್ತಿ ಮತ್ತಷ್ಟು ಅಸ್ವಸ್ಥರಾದಾಗ ತಕ್ಷಣ ಗಡಿಕಲ್ ಮಾರ್ಗವಾಗಿ ಶೃಂಗೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗೆ ಕೊಡಿಸಲಾಯಿತು” ಎಂದು ಪ್ರಯಾಣಿಕರೊಬ್ಬರು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುರ್ತು ಸಂದರ್ಭದಲ್ಲಿ ಒಬ್ಬ ವ್ಯಕ್ತಿಯ ಪ್ರಾಣ ಉಳಿಸಿದ ಚಾಲಕ ಹಾಗು ನಿರ್ವಾಹಕರಿಬ್ಬರನ್ನೂ ಪ್ರಯಾಣಿಕರು ಶ್ಲಾಘಿಸಿದ್ದಾರೆ. ತುರ್ತು ಸಂದರ್ಭದಲ್ಲಿ ತಮ್ಮ ಕರ್ತವ್ಯವನ್ನೂ ಮರೆತು ಓರ್ವ ವ್ಯಕ್ತಿಯ ಜೀವ ಉಳಿಸಿರುವುದು ಎಲ್ಲರಿಗೂ ಮಾದರಿ ಎಂದು ಸಾರ್ವಜನಿಕರು ಕೊಂಡಾಡಿದ್ದಾರೆ.

ಇದನ್ನು ಓದಿದ್ದೀರಾ? ಕಡೂರು | ನಾಪತ್ತೆಯಾಗಿದ್ದ ಎರಡು ವರ್ಷದ ಮಗು ತರೀಕೆರೆಯಲ್ಲಿ ಪತ್ತೆ

ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ಸನ್ನು ಆ್ಯಂಬುಲೆನ್ಸ್ ವೇಗದಲ್ಲಿ ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸುವ ಮೂಲಕ ಸಮಯ ಪ್ರಜ್ಞೆ ತೋರಿದ ಘಟನೆ ಕಳೆದ ಜುಲೈ ತಿಂಗಳಲ್ಲಿ ಮಂಗಳೂರಿನಲ್ಲಿ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...