ಚಿಕ್ಕಮಗಳೂರು | ಮುಖ್ಯವಾಹಿನಿಗೆ ಬಂದ ನಕ್ಸಲರ ಶಸ್ತ್ರಾಸ್ತ್ರ ವಶ

Date:

ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಮುಖ್ಯವಾಹಿನಿಗೆ ಬಂದಿದ್ದಾರೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಕ್ಕೆ ಪಡೆದ ಶಸ್ತ್ರಾಸ್ತ್ರಗಳಲ್ಲಿ ಒಂದು ಎ.ಕೆ-56 ಮತ್ತು ಮೂರು 303 ರೈಫಲ್ ಬಂದೂಕುಗಳು, ಹನ್ನೆರಡು ಬೋರ್ ಎಸ್‌ಬಿಬಿಎಲ್ ಮತ್ತು ಒಂದು ಸ್ವದೇಶಿ ಬಂದೂಕುಗಳು ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, 7.62 ಎಂಎಂ ಗಾತ್ರದ 11 ಎ.ಕೆ ಮದ್ದುಗುಂಡು, 303 ರೈಫಲ್‌ನ 133 ಮದ್ದುಗುಂಡು, 12 ಬೋರ್ ಕಾರ್ಟ್ರಿಡ್ಜಸ್‌, ಸ್ವದೇಶಿ ನಿರ್ಮಿತ ಪಿಸ್ತೂಲ್‌ನ 8 ಮದ್ದುಗುಂಡುಗಳು ಸೇರಿದಂತೆ ಒಟ್ಟು 176 ಮದ್ದುಗುಂಡು ಮತ್ತು 1 ಎ.ಕೆ-56 ಖಾಲಿ ಮ್ಯಾಗ್ಜಿನ್‌ಅನ್ನು ವಶಕ್ಕೆ ಪಡೆಯಲಾಗಿದೆ.

ಈ ವರದಿ ಓದಿದ್ದೀರಾ?: ‘ಹಿಂದುತ್ವ ಮೊದಲು – ಜಾತಿ ನಂತರ’: ಏನಿದು ಬಿಜೆಪಿಯ ‘ಹೈಂದವ ಸಂಖಾರವಂ’?

ಶಸ್ತ್ರಾಸ್ತ್ರ ವಶಕ್ಕೆ ಪಡೆರುವ ಬಗ್ಗೆ ಜಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...