ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ನಿರ್ವಾಹಕನ ಸಾವಿಗೆ ಕಾರಣರಾದವರನ್ನು ಅಮಾನತು ಮಾಡಿಸುವೆ: ಶಾಸಕ ತಮ್ಮಯ್ಯ

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರಿನ ನಿರ್ವಾಹಕ ಶ್ರೀನಾಥ್ ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಕಾರಣವೆಂದು ಆರೋಪಿಸಿ ದಲಿತಪರ ಸಂಘಟನೆಯಿಂದ ಚಿಕ್ಕಮಗಳೂರು ನಗರದ ವಿಭಾಗೀಯ ನಿಯಂತ್ರಣಧಿಕಾರಿ ಕಚೇರಿ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು.

Screenshot 2024 12 06 19 02 43 50 9c9388b9166bc4b41bce5a3ca423d863

“ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರಿನ ನಿರ್ವಾಹಕ ಶ್ರೀನಾಥ್ ಅವರು ಅಪಘಾತದಲ್ಲಿ ಸಾವನಪ್ಪಿರುವುದಕ್ಕೆ ಡಿಪೋ ಮ್ಯಾನೇಜರ್ ಬೇಬಿಬಾಯಿ ಹಾಗೂ ಮೆಕ್ಯಾನಿಕ್ ವಿಭಾಗದ ಮುಖ್ಯಸ್ಥ ಪರಮೇಶ್ವರಪ್ಪ ಅವರ ಕರ್ತವ್ಯ ಲೋಪವೇ ಕಾರಣವಾಗಿದ್ದು, ಇಬ್ಬರನ್ನು ಅಮಾನತುಗೊಳಿಸುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ” ಎಂದು ದಸಂಸ ಮುಖಂಡ ದಂಟರಮಕ್ಕಿ ಶ್ರೀನಿವಾಸ್‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ವಿಶ್ವ ಸ್ವಯಂ ಸೇವಕರ ದಿನಾಚರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸಂಸ ವತಿಯಿಂದ ಪ್ರತಿಭಟನೆ ನಡೆಸುತ್ತಿರುವುದು ಗಮನಕ್ಕೆ ಬಂದ ಕೂಡಲೇ ಚಿಕ್ಕಮಗಳೂರು ಕ್ಷೇತ್ರದ ಶಾಸಕ ತಮ್ಮಯ್ಯ ಸ್ಥಳಕ್ಕೆ ಭೇಟಿ ನೀಡಿ, “ನಿರ್ವಾಹಕ ಶ್ರೀನಾಥ್ ಸಾವಿಗೆ ಕಾರಣರಾದ ಅಧಿಕಾರಿಯನ್ನು ಅಮಾನತು ಮಾಡಿಸುತ್ತೇನೆ” ಎಂದು ಭರವಸೆ ನೀಡಿದ್ದಾರೆ ಎಂದು ದಸಂಸ ಮುಖಂಡ ದಂಟರಮಕ್ಕಿ ಶ್ರೀನಿವಾಸ್ ಈ ದಿನ.ಕಾಮ್‌ಗೆ ಮಾಹಿತಿ ತಿಳಿಸಿದ್ದಾರೆ.

ಈ ವೇಳೆ ಪ್ರತಿಭಟನೆಯಲ್ಲಿ ದಸಂಸ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...