ಕೋಲಾರ | 2.33 ಲಕ್ಷ ನಿವ್ವಳ ಲಾಭ ಗಳಿಸಿದ ಚಿಕ್ಕನಹಳ್ಳಿ ಡೈರಿ

Date:

ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 3.79ಲಕ್ಷ ಲಾಭಾಂಶ ಪಡೆದಿದ್ದು, 2.33 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಅಮರೇಶ್‌ ಹೇಳಿದರು.

ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ 2023-24ನೇ ಸಾಲಿನ ಸಾಮಾನ್ಯ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಘದ ಆಡಳಿತ ಮಂಡಳಿ ಹಾಗೂ ಹಾಲು ಉತ್ಪಾದಕರ ಸಹಕಾರದಿಂದ 2023-24ನೇ ಸಾಲಿನಲ್ಲಿ ಸಂಘಕ್ಕೆ 2.33 ಲಕ್ಷ ನಿವ್ವಳ ಲಾಭ ಬಂದಿದ್ದು, ಈ ವರ್ಷವು ಹಾಲು ಉತ್ಪಾದಕಕರಿಗೆ ಶೇ.2.10ರಷ್ಟು ಬೋನಸ್ ನೀಡಲಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಕಾರ ಕ್ಷೇತ್ರದಲ್ಲಿ ಟೀಕೆಗಳು ಸಹಜ. ಟೀಕೆಗಳನ್ನು ಮೆಟ್ಟಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಡೈರಿಯ ಅಭಿವೃದ್ಧಿಗೆ ಉತ್ಪಾದಕರು, ಆಡಳಿತ ಮಂಡಳಿಯ ಸದಸ್ಯರು, ಹಾಗೂ ಸಿಬ್ಬಂದಿ ಒಟ್ಟಾಗಿ ಕೆಲಸ ಮಾಡೋಣ. ಡೈರಿಗೆ ಹಾಲು ಉತ್ಪಾದಕರೇ ಶಕ್ತಿಯಾಗಿದ್ದು, ಗುಣಮಟ್ಟದ ಹಾಲು ಪೂರೈಕೆಯಿಂದ ಸಂಘದಿಂದ ಸಿಗುವ ವಿಶೇಷ ಸೌಲಭ್ಯಗಳನ್ನು ಪಡೆಯಬಹುದು ಎಂದು ಸಲಹೆ ನೀಡಿದರು.

ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ, ಹಾಲಿನ ಡೈರಿಗಳು ಅಭಿವೃದ್ಧಿಯಾಗಬೇಕಾದರೆ ಪಕ್ಷಾತೀತವಾಗಿ ಕೆಲಸ ಮಾಡಬೇಕು. ರೈತರು ಉತ್ತಮ ಕೊಬ್ಬಿನ ಅಂಶವಿರುವ ಹಾಲು ಸರಬರಾಜು ಮಾಡಿದಾಗ ಮಾತ್ರ ಡೈರಿ ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಗುತ್ತದೆ. ಹಸುಗಳಿಗೆ ಹೊಸ ಹೊಸ ರೋಗಗಳು ಕಾಣಿಸುತ್ತಿದ್ದು, ಹೈನುಗಾರರಿಗೆ ಹಸು ಸಾಕಣೆ ತಲೆಬಿಸಿಯಾಗಿದೆ. ಅದಕ್ಕಾಗಿ ರೈತರು ಹೆಚ್ಚಿನ ಕಾಳಜಿವಹಿಸಿ ಕಾಲಕಾಲಕ್ಕೆ ವ್ಯಾಕ್ಸಿನೇಷನ್ ಮಾಡಿಸಬೇಕು ಎಂದರು.

ಸಭೆಯಲ್ಲಿ ಕೋಲಾರ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಎಸ್.ರಾಮಾಂಜಿನಪ್ಪ, ಆಡಳಿತ ಮಂಡಳಿ ನಿರ್ದೇಶಕರಾದ ಬಿ.ಶ್ರೀನಿವಾಸಪ್ಪ, ಸಿ ನಾಗರಾಜ್, ರಮೇಶ್, ಅಚ್ಚಪ್ಪ, ಸಿ.ಸಿ ಶ್ರೀನಿವಾಸ್‌, ಭಾಗ್ಯಲಕ್ಷ್ಮೀ, ಶಾರದದೇವಿ, ಸೊಣ್ಣಮ್ಮ ವೆಂಕಟಮ್ಮ ವಿಮಲಮ್ಮ, ಕಾರ್ಯದರ್ಶಿ ಆ‌ರ್ ಗೋಪಾಲಪ್ಪ, ಗ್ರಾಮಸ್ಥರಾದ ಸಿ.ಎಸ್ ಅಂಜನಗೌಡ, ವೆಂಕಟರಮಣಪ್ಪ, ಶಿವಕುಮಾರ್ ಸೇರಿದಂತೆ ಹಾಲು ಉತ್ಪಾದಕರು, ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...