ಚಿಕ್ಕನಾಯಕನಹಳ್ಳಿ | 18’ಕ್ಕೆ ಅಲೆಮಾರಿಗಳ ಸುವರ್ಣಸೌಧ ಚಲೋ

Date:

ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ 49 ಅಲೆಮಾರಿ ಸಮುದಾಯಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಡಿಸೆಂಬರ್ 18, 2024 ರಂದು ಬೆಳಗಾವಿಯಲ್ಲಿ “ಸುವರ್ಣಸೌಧ ಚಲೋ….” ಹೋರಾಟ-ಪ್ರದರ್ಶನ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ‌ ಅಲೆಮಾರಿ ಬುಡಕಟ್ಟು ಮಹಾಸಭಾ ತಾಲ್ಲೂಕು ಅಧ್ಯಕ್ಷ ರಂಗನಾಥ್ ತಿಳಿಸಿದರು.

ಅಂದು ಮುಖ್ಯಮಂತ್ರಿಗಳು ಈಯೆಲ್ಲ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಅಲೆಮಾರಿಗಳ ಅಹವಾಲನ್ನು ಸ್ವೀಕರಿಸಿ, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರವನ್ನು ಒದಗಿಸಿಕೊಡುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದ ಅವರು, ಮುಖ್ಯಮಂತ್ರಿಗಳ ಎದುರು ಪ್ರಸ್ತಾಪಿಸಲಿರುವ ಕೆಲಮುಖ್ಯ ಬೇಡಿಕೆಗಳ ಬಗ್ಗೆ ಮಾಹಿತಿ ನೀಡಿದರು.

1000758278

ಮುಖ್ಯವಾಗಿ ಶಿಕ್ಷಣ ಮತ್ತು ಸರ್ಕಾರಿ ನೌಕರಿಯಲ್ಲಿ ಸೂಕ್ತ ಪ್ರಾತಿನಿಧ್ಯವೇ ಸಿಗದೆ ಅಲಕ್ಷಿತಗೊಂಡಿರುವ ಈಯೆಲ್ಲ 49 ವಂಚಿತ ಸಮುದಾಯಗಳಿಗೆ ಶೇ.3 ರಷ್ಟು ಒಳಮೀಸಲಾತಿ ನೀಡುವುದರ ಮೂಲಕ ಇವರ ಏಳ್ಗೆಗಾಗಿ ಅವಕಾಶ ಕಲ್ಪಿಸುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿಗಳಿಗಾಗಿ ತ್ವರಿತವಾಗಿ ಅಲೆಮಾರಿ ಆಯೋಗವನ್ನು ಸ್ಥಾಪಿಸುವುದು. ಈ ಹಿಂದಿನ ಸರ್ಕಾರ ಪ.ಜಾ ಮತ್ತು ಪ.ಪಂ.ಅಲೆಮಾರಿಗಳ ಮನೆ ನಿರ್ಮಾಣಕ್ಕಾಗಿ ಬಿಡುಗಡೆ ಮಾಡಿ ಮತ್ತೆ ಹಿಂಪಡೆದಿದ್ದ 300 ಕೋಟಿ ರೂಪಾಯಿಗಳ ಅನುದಾನವನ್ನು ಈಗ ಮತ್ತೆ ಬಿಡುಗಡೆ ಮಾಡಬೇಕು. ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಒಂದು ಅಲೆಮಾರಿ ಬುಡಕಟ್ಟು ಅಧ್ಯಯನ ಕೇಂದ್ರವನ್ನು ತೆರೆಯಬೇಕು. ವಿಧಾನ ಪರಿಷತ್ತಿಗೆ ನಡೆಯುವ ಆಯ್ಕೆಗಳಲ್ಲಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಅಲೆಮಾರಿ ಜಾತಿಯಿಂದ ಒಬ್ಬ ಸದಸ್ಯನನ್ನು ಆಯ್ಕೆ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸುವುದು. ಹೆಚ್ಚಿನ ಜನಸಂಖ್ಯೆ ಮತ್ತು ಪ್ರಬಲ ಅಲೆಮಾರಿ ಜಾತಿಗಳಾದ ಕೊರಮ ಮತ್ತು ಕೊರಚ ಜಾತಿಗಳನ್ನು ಹಾಲಿ ಇರುವ ಪ.ಜಾ ಮತ್ತು ಪ.ಪಂ.ಅಲೆಮಾರಿ ಅಭಿವೃದ್ಧಿ ನಿಗಮದಿಂದ ಬೇರ್ಪಡಿಸುವುದರ ಮೂಲಕ ಸೂಕ್ಷ್ಮ ಮತ್ತು ಅತಿಸೂಕ್ಷ್ಮ 49 ಅಲೆಮಾರಿ ಸಮುದಾಯಗಳಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂಬಂತಹವು ನಮ್ಮ ಪ್ರಮುಖ ಬೇಡಿಕೆಗಳು ಎಂದು ಅಲೆಮಾರಿ ಬುಡಕಟ್ಟು ಮಹಾಸಭಾ ಅಧ್ಯಕ್ಷ ರಂಗನಾಥ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿ – ಸಂಚಲನ
ಚಿಕ್ಕನಾಯಕನ ಸೀಮೆಯಿಂದ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...