ಚಿಕ್ಕಮಗಳೂರು | ಮತ್ತೆ ಮುನ್ನೆಲೆಗೆ ಬಾಬಾ ಬುಡನ್‌ಗಿರಿ ವಿವಾದ

Date:

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾಬಾಬುಡನ್‌ ಗಿರಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಧರ್ಮಾತೀತವಾಗಿ ಹಿಂದು-ಮುಸ್ಲಿಮರು ಪೂಜೆ ಸಲ್ಲಿಸುತ್ತಿದ್ದ ಬಾಬಾ ಬುಡನ್‌ಗಿರಿಯ ದರ್ಗಾವನ್ನು ದತ್ತಪೀಠವೆಂದು ಕರೆದು ಹಿಂದುತ್ವವಾದಿ ಸಂಘಟನೆಗಳು ಕೋಮು ವಿವಾದ ಹಚ್ಚಿವೆ. ಅಲ್ಲದೆ, ವರ್ಷಕ್ಕೊಮ್ಮೆ ಅಲ್ಲಿ ದತ್ತ ಜಯಂತಿ ಆಚರಿಸುತ್ತಿವೆ. ಇದೀಗ, ದತ್ತ ಜಯಂತಿಗೆ ಎರಡು ತಿಂಗಳು ಬಾಕಿ ಇರುವಾಗಲೇ, ಶ್ರೀರಾಮಸೇನೆ ಮತ್ತೆ ವಿವಾದವನ್ನು ಮುನ್ನೆಲೆಗೆ ತಂದಿದೆ.

ಬಾಬಾಬುಡನ್‌ ಗಿರಿಯಲ್ಲಿರುವ ಗೋರಿಗಳನ್ನು ಸ್ಥಳಾಂತರಿಸುವಂತೆ ಶ್ರೀರಾಮಸೇನೆ ಒತ್ತಾಯಿಸಿದೆ. ಗೋರಿಗಳ ಸ್ಥಳಾಂತರಕ್ಕೆ ಆಗ್ರಹಿಸಿ ಅಕ್ಟೋಬರ್​​​ 30ರಿಂದ ನವೆಂಬರ್​​​ 3ರವರೆಗೆ ದತ್ತಮಾಲಾ ಅಭಿಯಾನ ನಡೆಸುವುದಾಗಿ ಶ್ರೀರಾಮಸೇನೆ ಹೇಳಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಬಬುಡನ್ ಗಿರಿ ದರ್ಗಾಗೆ ಎಂಟು ಮಂದಿಯುಳ್ಳ ವ್ಯವಸ್ಥಾಪನ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯ ಸದಸ್ಯರಲ್ಲಿ ಏಳು ಮಂದಿ ಹಿಂದುಗಳೇ ಆಗಿದ್ದರು. ಅವರ ಹಿಂದುತ್ವವಾದಿ ಸಂಘಟನೆಗಳ ಪರವಾಗಿದ್ದಾರೆ. ಅವರದ್ದೇ ನೇತೃತ್ವದಲ್ಲಿ ಕಳೆದ ವರ್ಷ ದತ್ತ ಜಯಂತಿಯೂ ನಡೆದಿದೆ. ಆದರೆ, ಸಮಿತಿಯಲ್ಲಿ ಒಬ್ಬರು ಮಾತ್ರವೇ ಮುಸ್ಲಿಂ ಸಮುದಾಯದವರಿದ್ದು, ಸಮಿತಿ ಕೂಡ ಬಾಬಾಬುಡನ್‌ ಗಿರಿಯನ್ನು ದತ್ತಪೀಠ ಮಾಡಲು ಯತ್ನಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಕಳೆದ ವರ್ಷ ದತ್ತಜಯಂತಿಯಲ್ಲಿ ಮಾತ್ರ ಹಿಂದೂ ಅರ್ಚಕರಿಗೆ ಅವಕಾಶ ನೀಡಬೇಕೆಂದು ಕೋರ್ಟ್‌ ಹೇಳಿತ್ತು. ಆದರೆ, ನಿತ್ಯವೂ ಹಿಂದು ಅರ್ಚಕರು ಪೂಜೆ ಸಲ್ಲಿಸುತ್ತಿದ್ದಾರೆ. ಹೀಗಾಗಿ, ಹಿಂದು ಅರ್ಚಕರನ್ನು ವಜಾಗೊಳಿಸಬೇಕು. ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಸರ್ಕಾರಕ್ಕೆ ಸೈಯದ್​ ಬುಡೇನ್ ಶಾ ಖಾದ್ರಿ ಟ್ರಸ್ಟ್ ಮನವಿ ಮಾಡಿದೆ. ಈ ಬೆನ್ನಲ್ಲೇ ಬಾಬಾಬುಡನ್‌ಗಿರಿಯಲ್ಲಿ ಮತ್ತೆ ವಿವಾದವನ್ನು ಶ್ರೀರಾಮಸೇನೆ ಮುನ್ನೆಲೆಗೆ ತರಲು ಯತ್ನಿಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...