ಚಿಕ್ಕಮಗಳೂರು | ಕೆನರಾ ಬ್ಯಾಂಕ್‌ ಶಾಖೆ ಸ್ಥಳಾಂತರಿಸದಂತೆ ನಾಗರಿಕರ ಒತ್ತಾಯ

Date:

ಚಿಕ್ಕಮಗಳೂರು ನಗರದ ಕೋಟೆಯಲ್ಲಿ ಇರುವ ಕೆನರಾ ಬ್ಯಾಂಕ್ ಶಾಖೆಯನ್ನು ಎಸ್‌ಟಿಜೆ ಕಾಲೇಜಿನಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಶಾಖೆಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಕೋಟೆಯ ನಾಗರಿಕರು ಕೆನರಾ ಬ್ಯಾಂಕ್ ಕೇಂದ್ರ ಕಚೇರಿ ಸಿಇಒ ಅನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಸಮಾಜಿಕ ಕಾರ್ಯಕರ್ತ ಕೋಟೆ ಸೋಮಣ್ಣ ಮಾತನಾಡಿ, ಕೋಟೆ ಶಾಖೆಯಲ್ಲಿ ರೈತಾಪಿ ವರ್ಗದರು ಹೆಚ್ಚಾಗಿ ಖಾತೆದಾರರಾಗಿದ್ದಾರೆ. ಜೊತೆಗೆ ಬಡವರು, ಕೂಲಿ ಕಾರ್ಮಿಕರು, ವಯಸ್ಸಾದ ಹಿರಿಯ ಪಿಂಚಣಿ ದಾರರು ಹಾಗೂ ಸರ್ಕಾರಿ ನೌಕರರು ಈ ಶಾಖೆಯಲ್ಲಿ ಖಾತೆದಾರರಾಗಿತ್ತಾರೆ. ಕೋಟೆಗೆ ಈ ಕೆನರಾ ಬ್ಯಾಂಕ್ ಶಾಖೆ ತರಲು ಏಳು ವರ್ಷಗಳ ಹಿಂದೆ ಇದ್ದ ಬ್ಯಾಂಕ್ ಮ್ಯಾನೇಜರ್ ಶ್ರೀನಿವಾಸ್ ಮತ್ತು ಸಾಕಷ್ಟು ಮಂದಿ ಶ್ರಮ ವಹಿಸಿದ್ದಾರೆ ಎಂದು ತಿಳಿಸಿದರು.

ಬಹಳಷ್ಟು ರೈತರು ಈ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದಾರೆ, ಚಿನ್ನದ ಮೇಲಿನ ಸಾಲ ಪಡೆದಿದ್ದಾರೆ, ಸೀಕ್ರೇಟ್ ಲಾಕರ್ ಓಪನ್ ಮಾಡಿಸಿರುತ್ತಾರೆ. ಬಹಳಷ್ಟು ಹಿರಿಯ ಪಿಂಚಣಿ ದಾರರು ಇದ್ದಾರೆ, ಸಾವಿರಾರು ಖಾತೆದಾರರು ಇದ್ದಾರೆ. ಲಾಭದಾಯಕವಾದ ಈ ಬ್ಯಾಂಕ್ ಅನ್ನು ಯಾವುದೋ ಒಂದು ಕಾರಣಕ್ಕೆ ಬದಲಾವಣೆ ಮಾಡುವುದು ಸರಿಯಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಚಿಕ್ಕಮಗಳೂರು

ಶಾಖೆ ವಿಲೀನ ಮಾಡುವುದರಿಂದ ಬಹಳಷ್ಟು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಈ ವಿಷಯವನ್ನು ಮರು ಪರಿಶೀಲನೆ ಮಾಡಿ. ಮೇಲಾಧಿಕಾರಿಗಳು ಇದರ ಬಗ್ಗೆ ಬ್ಯಾಂಕ್‌ನ ಗ್ರಾಹಕರಿಗೆ ಒಳ್ಳೆಯ ಮತ್ತು ಆಶಾದಾಯಕ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಾಗರಿಕರಾದ ಕೋಟೆ ಸೋಮಣ್ಣ, ಯಶೋಧ ರವೀಂದ್ರ, ಸುಧಾಕರ್ ಗೌಡ್ರ, ಹೇಮಚಂದ್ರು, ಶಶಿ ಕುಮಾರ್, ಶಿವಣ್ಣ ಹಾಗೂ ಇತರರು ಇದ್ದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಮಳೆಗಾಲದ ಅವಘಡಗಳಿಗೆ ತುರ್ತಾಗಿ ಸ್ಪಂದಿಸಿ; ಶಾಸಕ ಮಂತರ್‌ಗೌಡ ನಿರ್ದೇಶನ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...