ಚಿಕ್ಕಮಗಳೂರು | ಕರ್ತವ್ಯ ಲೋಪ ಆರೋಪ; ಜಿಲ್ಲಾ ವಕ್ಫ್‌ಬೋರ್ಡ್ ಅಧಿಕಾರಿ ಅಮಾನತು

Date:

ಕರ್ತವ್ಯ ಲೋಪ ಎಸಗಲಾಗಿದೆ ಎನ್ನುವ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ವಕ್ಫ್‌ಬೋರ್ಡ್‌ ಅಧಿಕಾರಿಯನ್ನು ಅಮಾನತು ಮಾಡಿ ರಾಜ್ಯ ವಕ್ಫ್‌ಬೋರ್ಡ್‌ ಕಾರ್ಯ ನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಾಮಿಯಾ ಮಸೀದಿ ಹಾಗೂ ನಲ್ಲೂರು ಮಠ ನಡುವಿನ ವಿವಾದಿತ ಬಡಾ ಮಕಾನ್ ಜಾಗದಲ್ಲಿದ್ದ ಕಟ್ಟಡ ತೆರವು ಪ್ರಕ್ರಿಯೆ ಕೈಗೊಳ್ಳುವ ಪೂರ್ವದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಿಲ್ಲ ಹಾಗೂ ಪೊಲೀಸ್‌ ಭದ್ರತೆ ಪಡೆದಿರುವುದಿಲ್ಲ. ಜತೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿ ನಡೆದುಕೊಳ್ಳಲಾಗಿದೆ ಎಂದು ಆರೋಪಿಸಿ ಜಿಲ್ಲಾ ವಕ್ಫ್‌ ಅಧಿಕಾರಿ ಸೈಯದ್‌ ಸತಾರ್‌ ಹುಸೇನಿ ಅವರನ್ನು ಅಮಾನತುಗೊಳಿಸಲಾಗಿದೆ.

ನಗರದ ಜಾಮೀಯಾ ಮಸೀದಿಗೆ ಸೇರಿದ್ದು ಎನ್ನಲಾದ ಬಡಾ ಮಕಾನ್ ವಕ್ಫ್ ಆಸ್ತಿಯಲ್ಲಿ ಎನ್.ಎಂ.ಕಮಲಮ್ಮ ಹಾಗೂ ಇತರರು ಮತ್ತು ವಕ್ಫ್ ಮಂಡಳಿ ಹಾಗೂ ಜಾಮಿಯಾ ಮಸೀದಿ ಆಡಳಿತ ಸಮಿತಿ ಮಧ್ಯೆ ನ್ಯಾಯಾಲಯಲ್ಲಿ ವಿವಾದ ನಡೆಯುತ್ತಿದೆ. ಈ ಮಧ್ಯೆ ಹೈಕೋರ್ಟ್ ಆದೇಶದನ್ವಯ ಇತ್ತೀಚೆಗೆ ವಕ್ಫ್ ಬೋರ್ಡ್ ಜಿಲ್ಲಾ ಅಧಿಕಾರಿ ಸೈಯದ್ ಸತ್ತಾರ್ ಹುಸೇನಿ ನೇತೃತ್ವದದಲ್ಲಿ ಬಡಾ ಮಕಾನ್ ಜಾಗದಲ್ಲಿದ್ದ ಕಟ್ಟಡ ತೆರವು ಮಾಡಲಾಗಿತ್ತು. ಈ ತೆರವು ಕಾರ್ಯಾಚರಣೆ ವಿರುದ್ಧ ಕೆಲ ಸಂಘಟನೆಗಳು ದೂರು ನೀಡಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕೊಡಗು, ಹಾಸನ, ಚಿಕ್ಕಮಗಳೂರು ಆನೆ ಸಮಸ್ಯೆಗೆ ಶಾಶ್ವತ ಪರಿಹಾರ: ಸಚಿವ ಈಶ್ವರ ಖಂಡ್ರೆ

ಈ ಹಿನ್ನೆಲೆ ತೆರವು ಪೂರ್ವದಲ್ಲಿ ನಗರಸಭೆ ಆಯುಕ್ತರಿಗೆ ಮಾಹಿತಿ ನೀಡಿಲ್ಲ, ಪೊಲೀಸ್ ಠಾಣೆಗೆ ಬಂದೋಬಸ್ತ್ ಒದಗಿಸಲು ಮಾಹಿತಿ ನೀಡಿಲ್ಲ. ದಾಖಲಾತಿಗಳನ್ನು ಸರಿಯಾಗಿ ಪರಿಶೀಲಿಸದೆ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಅಧಿಕಾರಿಯ ಬೇಜವಾಬ್ದಾರಿಯಿಂದ ವಿವಾದಿತ ಸ್ಥಳದಲ್ಲಿ ಪ್ರಕ್ಷಿಬ್ಧ ವಾತಾವರಣ ಉಂಟಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...