ಚಿಕ್ಕಮಗಳೂರು | ಭೂಮಿ-ವಸತಿ ಇಲ್ಲದವರಿಗೆ ಸರ್ಕಾರ ನ್ಯಾಯ ದೊರಕಿಸಲು ಚಿಂತಿಸಲಿ: ಕೆ ಎಲ್ ಅಶೋಕ್

Date:

ಅರಣ್ಯ ರಾಷ್ಟ್ರೀಯ ಸಂಪತ್ತಾಗಿದ್ದು ಜನರನ್ನು ಹೊರಗಿಟ್ಟು ಪರಿಸರ ರಕ್ಷಣೆ ಮಾಡುವುದು ಕಷ್ಟಸಾಧ್ಯ, ಬಡವರನ್ನು ಬೀದಿಗೆ ತಳ್ಳಿ ಶ್ರೀಮಂತರನ್ನು ರಕ್ಷಿಸುವ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಹೊಂದಾಣಿಕೆ ಖಂಡನೀಯ. ಭೂಮಿ-ವಸತಿ ಇಲ್ಲದವರಿಗೆ ನ್ಯಾಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕು ಎಂದ ಜನಶಕ್ತಿ ರಾಜ್ಯ ಸಮಿತಿಯ ಕಾರ್ಯದರ್ಶಿ ಕೆ. ಎಲ್ ಅಶೋಕ್ ಹೇಳಿದರು.

ಚಿಕ್ಕಮಗಳೂರಿನಲ್ಲಿಂದು ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರ ಜಮೀನಿನಿಂದಲೇ ಸಮೀಕ್ಷೆ ನಡೆಸಲಿ. ಒತ್ತುವರಿ ತೆರವು ಕಾರ್ಯ ಅಲ್ಲಿಂದಲೇ ಆರಂಭವಾಗಲಿ ಎಂದು ಕರ್ನಾಟಕ ಜನಶಕ್ತಿ ಒತ್ತಾಯಿಸಿದ್ದು, ಬದುಕಿನ ನಿರ್ವಹಣೆಗಾಗಿ ಬಡವರು ಮಾಡಿರುವ ಒತ್ತುವರಿಯನ್ನು ಯಾವುದೇ ಕಾರಣಕ್ಕೂ ತೆರವು ಮಾಡದಂತೆ ಆಗ್ರಹಿಸಿದರು.

ಸಣ್ಣ ಹಿಡುವಳಿದಾರರು ಕಳೆದ ಅನೇಕ ವರ್ಷಗಳಿಂದ ಶ್ರಮಪಟ್ಟು ಬೆಳೆಸಿದ ಗಿಡಗಳನ್ನು ಏಕಾಏಕಿ ಕಡಿದು ಹಾಕುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕೆ ಎಲ್ ಅಶೋಕ್, ಅರಣ್ಯ ಇಲಾಖೆ ಮಾನವೀಯ ನೆಲೆಗಟ್ಟಿನಲ್ಲಿ ವರ್ತಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಸರ ನಾಶ ಮತ್ತು ವಿಕೋಪಕ್ಕೆ ಬಡವರು ಮಾಡಿದ ಕೃಷಿ ಚಟುವಟಿಕೆ ಕಾರಣವಲ್ಲ. ಬದಲಾಗಿ ಕಾರ್ಪೊರೇಟ್ ಸಂಸ್ಥೆಗಳು, ಗಣಿಗಾರಿಕೆ ಹಾಗೂ ಅವೈಜ್ಞಾನಿಕ ಕಾಮಗಾರಿಗಳು ಎನ್ನುವುದನ್ನು ಅರಣ್ಯ ಸಚಿವರು ಮೊದಲು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಒತ್ತುವರಿ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಸ್ಪಷ್ಟ ನಿರ್ಧಾರ ತೆಗೆದುಕೊಂಡು ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಆಗ್ರಹಿಸಿದರು. ಕಂದಾಯ ಭೂಮಿ ಒತ್ತುವರಿಯನ್ನು ಗುತ್ತಿಗೆ ನೀಡುವ ಸರ್ಕಾರದ ಕ್ರಮ ಖಂಡಿಸಿ, ಸರ್ಕಾರ ನಿರ್ಧಾರವನ್ನು ಪುನರ್‌ ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಆಗಸ್ಟ್ 21ರಂದು ಒತ್ತುವರಿ ತೆರವು ವಿರೋಧಿಸಿ ಹಾಗೂ ಪರಿಸರ ಸಂರಕ್ಷಣೆ ಮತ್ತು ಭೂಮಿ ಇಲ್ಲದವರಿಗೆ ಭೂಮಿ ನೀಡಲು ಒತ್ತಾಯಿಸಿ ಕರ್ನಾಟಕ ಜನಶಕ್ತಿಯ ವತಿಯಿಂದ ಚಿಕ್ಕಮಗಳೂರಿನ ಆಝಾದ್ ಪಾರ್ಕ್‌ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿಯ ಗೌಸ್ ಮೊಹಿದ್ದೀನ್, ಮುನ್ನ, ಪುಟ್ಟಸ್ವಾಮಿ, ಗಣೇಶ್,ದೇವರಾಜು ಮತ್ತಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...