ಚಿಕ್ಕಮಗಳೂರು | ಗುಡ್ಡ ಕುಸಿತ; ಚಾರ್ಮಾಡಿ ಘಾಟ್‌ ರಸ್ತೆಯೂ ಬಂದ್

Date:

ಚಿಕ್ಕಮಗಳೂರು-ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟ್‌ ರಸ್ತೆಯ ಮೇಲೆ ಗುಡ್ಡ ಕುಸಿದಿದ್ದು, ಸಂಚಾರ ಬಂದ್‌ ಆಗಿದೆ. ಇತ್ತೀಚಿಗೆ ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ಶಿರಾಡಿ ಘಾಟ್‌ನಲ್ಲಿಯೂ ಗುಡ್ಡ ಕುಸಿದಿದ್ದು, ಆ ರಸ್ತೆಯೂ ಬಂದ್‌ ಆಗಿದೆ. ಹಾಗಾಗಿ, ವಾಹನ ಸವಾರರು ಬೆಂಗಳೂರು-ಮಂಗಳೂರು ನಡುವಿನ ಸಂಚಾರಕ್ಕೆ ಸಾರ್ಮಾಡಿ ಘಾಟ್ ರಸ್ತೆಯನ್ನು ಆಶ್ರಯಿಸಿದ್ದರೂ, ಈಗ ಆ ರಸ್ತೆಯೂ ಬಂದ್‌ ಆಗಿದ್ದು, ವಾಹನ ಸವಾರರು, ಪ್ರಯಾಣಿಕರು ಪರಿದಾಡುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ 173ರಲ್ಲಿರುವ ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಕೊಟ್ಟಿಗೆಹಾರ ಮತ್ತು ಬೆಳ್ತಂಗಡಿ ಬಳಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ನೂರಾರು ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ.

ಇತ್ತ,ಹಾಸನ ಜಿಲ್ಲೆಯ ಸಕಲೇಶಪುರ ಬಳಿಯ ದೊಡ್ಡತಪ್ಲು ಬಳಿ ಶಿರಾಡಿ ಘಾಟ್‌ನಲ್ಲಿಯೂ ಗುಡ್ಡ ಕುಸಿದಿದ್ದು, ಅಲ್ಲಿಯೂ ವಾಹನ ದಟ್ಟಣೆ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿಯನ್ನು ಅಗಲೀಕರಣ ಮತ್ತು ಕಾಂಕ್ರಿಟೀಕರಣ ಮಾಡುತ್ತಿದ್ದ ಖಾಸಗಿ ಗುತ್ತಿಗೆ ಕಂಪನಿಯ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಕಾಮಗಾರಿ ನಡೆಸುತ್ತಿರುವ ಕಾರ್ಮಿಕರು ಮಣ್ಣು ತೆರವುಗೊಳಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಬೆಂಗಳೂರು-ಮಂಗಳೂರು ನಡುವೆ ಮತ್ತೊಂದು ಸಂಪರ್ಕ ಮಾರ್ಗವಾಗಿದ್ದ, ರೈಲ್ವೇ ಮಾರ್ಗದಲ್ಲಿಯೂ ಹಳಿಯ ಮೇಲೆ ಗುಡ್ಡ ಕುಸಿದಿದ್ದು, ರೈಲು ಸಂಚಾರವೂ ಬಂದ್‌ ಆಗಿತ್ತು. ಬಹುಶಃ ಇಂದಿನಿಂದ ರೈಲು ಸಂಚಾರ ಮತ್ತೆ ಆರಂಭವಾಗುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...