ಚಿಕ್ಕಮಗಳೂರು l ಭಾರತದ ಕಾಫಿ ಉತ್ಪಾದನೆಯ ಶೇಕಡಾ 70ರಷ್ಟು ವಿದೇಶಕ್ಕೆ ರಫ್ತು

Date:

ಮಲೆನಾಡಿನಲ್ಲಿ ಬೆಳೆಯುವಂತಹ ಕಾಫಿ ಎಲ್ಲೆಡೆ ಹೆಸರುವಾಸಿಯಾಗಿದೆ. ಹಾಗೆಯೇ, ಬೇರೆ ಬೇರೆ ದೇಶ ವಿದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಭಾರತದಲ್ಲಿ ಕಾಫಿ ಒಂದು ಪ್ರಮುಖ ಬೆಳೆಯಾಗಿದ್ದು, ದೇಶದ ಒಟ್ಟು ಉತ್ಪಾದನೆಯ ಶೇಕಡಾ 70ಕ್ಕೂ ಅಧಿಕ ಕಾಫಿಯನ್ನು 120ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಯುರೋಪಿಯನ್ ಮಾರುಕಟ್ಟೆಯ ಪಾಲು ಶೇಕಡಾ 60 ರಷ್ಟಿದೆ ಎಂದು ಚಿಕ್ಕಮಗಳೂರು ಕಾಫಿ ಮಂಡಳಿ ಉಪ ನಿರ್ದೇಶಕ ವೆಂಕಟರೆಡ್ಡಿ ತಿಳಿಸಿದ್ದಾರೆ. 

ಯುರೋಪಿಯನ್ ಒಕ್ಕೂಟವು ಇತ್ತೀಚೆಗೆ ಜಾರಿಗೊಳಿಸಿದ ಅರಣ್ಯ ಕಡಿತ ನಿರ್ಬಂಧ ನೀತಿ ಅಡಿಯಲ್ಲಿ ಕಾಫಿಯನ್ನೂ ಸೇರ್ಪಡೆ ಮಾಡಲಾಗಿದೆ. ಈ ನಿಯಮದ ಪ್ರಕಾರ, ಯುರೋಪಿಯನ್ ಮಾರುಕಟ್ಟೆಗೆ ನೇರವಾಗಿ ಕಾಫಿಯನ್ನು ರಫ್ತು ಮಾಡುವವರು, ಅಥವಾ ತಮ್ಮ ಕಾಫಿಯನ್ನು ವ್ಯಾಪಾರಿಗಳು, ಕ್ಯೂರರ್‌ಗಳು ಅಥವಾ ರಫ್ತುದಾರರಿಗೆ ಮಾರಾಟ ಮಾಡುವವರು ತಮ್ಮ ತೋಟದ ಭೂ ಪ್ರದೇಶದ ಸ್ಥಳಾಂಕ (Coordinates) ಅಥವಾ ಬಹುಭುಜ ಆಕಾರ (Polygon)ವನ್ನು ಜಿಯೋ ಜಾಸನ್ (GeoJSON) ಸ್ವರೂಪದಲ್ಲಿ ಒದಗಿಸಬೇಕಾಗುತ್ತದೆ ಎಂದು ಹೇಳಲಾಗಿದೆ.

ಯುರೋಪಿಯನ್ ಆಮದುದಾರರು ಈ ಮಾಹಿತಿಯನ್ನು ಬಳಸಿ, 2020 ಡಿಸೆಂಬರ್ 31ರ ನಂತರ ಅರಣ್ಯ ಕಡಿತಗೊಂಡ ಭೂಮಿಯಲ್ಲಿ ಕಾಫಿ ಬೆಳೆದಿದೆಯೇ ಇಲ್ಲವೇ ಎಂದು ಪರಿಶೀಲಿಸುತ್ತಾರೆ. ಈ ಪ್ರಕ್ರಿಯೆಯನ್ನು ಸುಲಭಗೊಳಿಸಲು, ಭಾರತದ ಕಾಫಿ ಮಂಡಳಿಯು ಇಂಡಿಯಾ ಕಾಫಿ ಆಪ್ ನಲ್ಲಿ ಹೊಸ ಆಯ್ಕೆಯನ್ನು ಪರಿಚಯಿಸಿದೆ. ರೈತರು ತಮ್ಮ ಮೊಬೈಲ್‌ಗಳಲ್ಲಿ ಆಪ್‌ ಡೌನ್‌ಲೋಡ್ ಮಾಡಿ, ಬೆಳೆಗಾರರಾಗಿ ನೋಂದಾಯಿಸಿಕೊಂಡು, ತೋಟದ ಸಳಾಂಕ ಅಥವಾ ಬಹುಭುಜ ಆಕಾರವನ ರಚಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಸೆ. 24ರಂದು ಪುನೀತ್ ರಾಜ್‌ಕುಮಾ‌ರ್ ಪುತ್ಥಳಿ ಅನಾವರಣ

ಸ್ಥಳೀಯ ಕಾಫಿ ಮಂಡಳಿ ವಿಸ್ತರಣಾ ಅಧಿಕಾರಿ ಪರಿಶೀಲನೆ ಮಾಡಿದ ನಂತರ ರೈತರು ಅದನ್ನು ಜಿಯೋ ಜಾಸನ್ ಸ್ವರೂಪದಲ್ಲಿ ಡೌನ್‌ಲೋಡ್ ಮಾಡಿಕೊಂಡು ಖರೀದಿದಾರರೊಂದಿಗೆ ಹಂಚಿಕೊಳ್ಳಬಹುದು. ತೋಟದ ಗಾತ್ರವು 4 ಹೆಕ್ಟೇರ್‌ಗಿಂತ ಕಡಿಮೆ ಇದ್ದರೆ ಸ್ಥಳಾಂಕ (Coordinates) ಸಾಕು. 4 ಹೆಕ್ಟೇರ್‌ಗಿಂತ ಹೆಚ್ಚು ಇದ್ದರೆ ಬಹುಭುಜ (Polygon) ಆಕಾರ ಕಡ್ಡಾಯ. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕಾಫಿ ಮಂಡಳಿ ವಿಸ್ತರಣಾ ಅಧಿಕಾರಿಯನ್ನು ಸಂಪರ್ಕಿಸಬಹುದು ಅಥವಾ 99026 73939 ಗೆ ಕರೆ ಮಾಡಬಹುದು ಎಂದು ಕಾಫಿ ಮಂಡಳಿಯಿಂದ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...