ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

Date:

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ ಹೊಸ ನಿಯಮ ಜಾರಿಯಾಗಿದೆ. ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಕನಿಷ್ಠ ಐದು ವಾಹನಗಳು ಒಟ್ಟಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ರಾತ್ರಿ ವೇಳೆ ಸಂಚರಿಸುವ ವಾಹನಗಳನ್ನು ಚೆಕ್ ಪೋಸ್ಟ್ ದಾಟುವ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಿ, ಐದು ವಾಹನಗಳು ಒಟ್ಟಾಗಿ ಹೊರಡುವಂತೆ ವ್ಯವಸ್ಥೆ ರೂಪಿಸಲಾಗಿದೆ. ದಟ್ಟ ಅರಣ್ಯದಿಂದ ಸುತ್ತುವರಿದ ಈ ಘಾಟ್‌ನಲ್ಲಿ ರಾತ್ರಿ ವೇಳೆ ಗೋ ಕಳ್ಳತನ ಹಾಗೂ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಪೊಲೀಸರು ಮುಂದಾಗಿದ್ದಾರೆ.

ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಈಗಿರುವ ಬ್ಯಾರಿಕೇಡ್ ಬದಲಾಗಿ ಹೊಸ ಭೂಮ್ ಬ್ಯಾರಿಯರ್ ನಿರ್ಮಿಸಲಾಗುತ್ತಿದೆ. ರಾತ್ರಿ ವೇಳೆ ಒಬ್ಬ ಪಿಎಸೈ ನೇತೃತ್ವದಲ್ಲಿ ಪೊಲೀಸರು ಕಾವಲು ನಿಲ್ಲಲಿದ್ದಾರೆ. ಜೊತೆಗೆ ಚೆಕ್ ಪೋಸ್ಟ್‌ನಿಂದ ಒಂದೂವರೆ ಕಿಮೀ ದೂರದಲ್ಲಿರುವ ಕಚ್ಚಾ ರಸ್ತೆಯನ್ನು ಗೋ ಕಳ್ಳರು ದುರುಪಯೋಗ ಮಾಡುತ್ತಿದ್ದರೆಂಬ ದೂರು ಹಿನ್ನೆಲೆಯಲ್ಲಿ, ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿ ಆ ರಸ್ತೆಯಲ್ಲಿ ಗೇಟ್ ನಿರ್ಮಿಸಲು ನಿರ್ಧರಿಸಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನ ಓದಿದ್ದೀರಾ?ಚಿಕ್ಕಮಗಳೂರು l ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಸರಣಿ ಅಪಘಾತ

ಈ ಗೇಟ್ ರಾತ್ರಿ 10 ರಿಂದ ಬೆಳಿಗ್ಗೆ 6ರ ವರೆಗೆ ಮುಚ್ಚಿರಲಿದೆ. ಕೊಟ್ಟಿಗೆಹಾರ ಚೆಕ್ ಪೋಸ್ಟ್ ಮೂಲಕ ಹಾದು ಹೋಗುವ ಎಲ್ಲಾ ವಾಹನಗಳ ವಿವರಗಳು ಸಿಸಿಟಿವಿಯಲ್ಲಿ ದಾಖಲಾಗಲಿದ್ದು, ಪೊಲೀಸರ ದಾಖಲೆ ಪುಸ್ತಕದಲ್ಲೂ ಬರೆಯಲಾಗುತ್ತದೆ ಎಂದು ಎಸ್ಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...