ಚಿಕ್ಕಮಗಳೂರು l ಕಳ್ಳತನದ ಮಾಲು ಖರೀದಿಸಬೇಡಿ; ಜನಜಾಗೃತಿ ಜಾಥಾ

Date:

ʼಕಳ್ಳತನ ಮಾಡಿರುವ ಉತ್ಪನ್ನ ಕೊಳ್ಳಬೇಡಿ’ ಎಂಬ ವಿನೂತನ ಜನಜಾಗೃತಿ ಕಾಲ್ನಡಿಗೆ ಜಾಥಾ ಸೋಮವಾರ ಮೂಡಿಗೆರೆ ತಾಲೂಕು ಬಣಕಲ್‌ ಪಟ್ಟಣದಲ್ಲಿ ದಿ ಪ್ಲಾಂಟರ್ಸ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಬಣಕಲ್ ಪೊಲೀಸ್‌ ಠಾಣೆಯ ಸಹಯೋಗದಲ್ಲಿ ನಡೆಯಿತು. 

ಅಪರಿಚಿತರು ಕಾಫಿ, ಮೆಣಸು, ಅಡಿಕೆ ಮುಂತಾದ ಕದ್ದ ಉತ್ಪನ್ನಗಳನ್ನು ಮಾರಾಟ ಮಾಡಲು ಬಂದಾಗ ಖರೀದಿದಾರರು ಹಾಗೂ ಅಂಗಡಿ ಮಾಲೀಕರು ಖರೀದಿಸದೆ, ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಸ್ಥಳೀಯ ಪೊಲೀಸರಿಗೆ ಅಥವಾ 112 ಸಹಾಯವಾಣಿಗೆ ಮಾಹಿತಿ ನೀಡುವಂತೆ ಅರಿವು ಮೂಡಿಸಲಾಯಿತು.

ಜಾಥಾದಲ್ಲಿ ಸಂಘಟಕ ಬಿ ಸಿ ಪ್ರವೀಣ್‌ ಗೌಡ ಮಾತನಾಡಿ, “ಒಂದೆಡೆ ಕಾಫಿ ಬೆಳೆಗಾರರಿಗೆ ತಾವು ಬೆಳೆದ ಬೆಳೆ ಕಳ್ಳರ ಪಾಲಾಗುತ್ತಿರುವುದು ತಲೆನೋವು ತರಿಸಿದೆ. ಇದೀಗ ಕಳ್ಳರ ಹಾವಳಿಯಿಂದಾಗಿ ಬೆಳೆ ಉಳಿಸಿಕೊಳ್ಳಲು ಬೆಳೆಗಾರರು ಸಂಕಷ್ಟ ಎದುರಿಸುವಂತಾಗಿದೆ. ಈ ಬಾರಿ ಫಸಲು ಚೆನ್ನಾಗಿದ್ದು, ಕಾಫಿ ಬೆಲೆ ಕೂಡ ಈ ಹಿಂದೆಂದಿಗಿಂತಲೂ ಅತ್ಯುತ್ತಮವಾಗಿದೆ. ಆದರೆ, ಹೆಚ್ಚಿನ ಬೆಲೆ ಜತೆಗೆ ಕಾಫಿ ಬೆಳೆಗಾರರಿಗೆ ಹೊಸ ತಲೆನೋವು ಶುರುವಾಗಿದೆ. ಕಾಫಿಯನ್ನು ಕಣದಲ್ಲಿ ಸುಮಾರು 10-12 ದಿನಗಳ ಕಾಲ ಬಯಲಿನಲ್ಲಿ ಒಣಗಿಸಬೇಕಾಗುತ್ತದೆ. ಸಾಮಾನ್ಯವಾಗಿ ಕಾಫಿ ಒಣಗಿಸುವ ಕಣ ಮತ್ತು ಮಾಲೀಕನ ಮನೆ ದೂರವೇ ಇರುತ್ತದೆ. ಕಣದ ಕೊರತೆ ಇರುವವರು ಗದ್ದೆಯಲ್ಲೇ ಕಾಫಿ ಒಣಗಿಸುತ್ತಾರೆ. ಇದರಿಂದ ಕಳ್ಳತನ ಮಾಡಲು ಸುಲಭವಾಗಿರುವುದರಿಂದ ಈ ಬಗ್ಗೆ ಜಾಗೃತಿ ಮೂಡಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮುಖ್ಯವಾಹಿನಿಗೆ ಬಂದ ನಕ್ಸಲರ ಶಸ್ತ್ರಾಸ್ತ್ರ ವಶ

ಈ ವೇಳೆ ರೈತರು, ಕಾರ್ಮಿಕರು, ಮಾಲೀಕರು ಸೇರಿದಂತೆ ಜಾಥಾದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...