ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕು ಕೊಟ್ಟಿಗೆಹಾರದಲ್ಲಿ ಐವರಿಗೆ ಹುಚ್ಚು ನಾಯಿ ಕಡಿದು ಗಾಯಗೊಂಡಿದ್ದಾರೆ.
ಎಲ್ಲೆಡೆ ಹುಚ್ಚುನಾಯಿಗಳ ಕಾಟ ಹೆಚ್ಚಾಗಿದ್ದು, ಕೊಟ್ಟಿಗೆಹಾರ ಪಟ್ಟಣದ ವಿವಿಧ ಭಾಗಗಳಲ್ಲಿ ಹುಚ್ಚು ನಾಯಿ ಜನರ ಮೇಲೆ ದಾಳಿ ಮಾಡಿದೆ. ಸುತ್ತಮುತ್ತಲಿನ ಜನರು ಭಯಭೀತಿಯಿಂದ ಓಡಾಡುವ ಪರಿಸ್ಥಿತಿ ಎದುರಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಯುವಕನಿಂದ ಪ್ರೀತಿ ಮೋಸ; ಯುವತಿ ಕಲ್ಯಾಣ ಮಂಟಪದಲ್ಲಿ ಗಲಾಟೆ
ಹುಚ್ಚು ನಾಯಿ ಕಡಿದು ಗಾಯಗೊಂಡವರು ಸ್ಥಳೀಯ ಬಣಕಲ್ ಸಾಯಿ ಕೃಷ್ಣ ಆಸ್ಪತ್ರೆಯಲ್ಲಿ ತಕ್ಷಣ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಘಟನೆಯಿಂದ ಕೊಟ್ಟಿಗೆಹಾರ ಜನತೆ ತೀವ್ರ ಆತಂಕಕ್ಕೆ ಒಳಗಾಗಿದ್ದು, ಕೊನೆಗೆ ಹುಚ್ಚು ನಾಯಿಯನ್ನು ಸ್ಥಳೀಯರು ಹೊಡೆದು ಸಾಯಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಘಟನೆಯನ್ನು ಗಮನಿಸಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.





