ಚಿಕ್ಕಮಗಳೂರು l ರೋಟರಿ ಜಿಲ್ಲಾ ಮಟ್ಟದ ಶೃಂಗ ವೈಭವ ಸಾಂಸ್ಕೃತಿಕ ಕಾರ್ಯಕ್ರಮ

Date:

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಜೆಸಿಬಿಎಂ ಕಾಲೇಜಿನಲ್ಲಿ ಮಂಗಳವಾರ ನಡೆದ ರೋಟರಿಯ ಜಿಲ್ಲಾ ಮಟ್ಟದ ಶೃಂಗ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಲಾಗಿದೆ.

ಸಮಾಜದಲ್ಲಿ ಸೇವೆ ಸಲ್ಲಿಸಲು ಸಾಕಷ್ಟು ಮುಕ್ತ ಅವಕಾಶಗಳಿವೆ. ಅದರ ಸದುಪಯೋಗವನ್ನು ಮಾಡಿಕೊಳ್ಳುವುದು ಎಲ್ಲರ ಕರ್ತವ್ಯ. ಒಳಿತಿಗಾಗಿ ಒಂದಾಗೋಣ ಎಂಬುದು ಈ ಬಾರಿಯ ರೋಟರಿ ಸಂಸ್ಥೆಯ ಸರಳವಾದ ಸಂದೇಶ. ಪ್ರಸ್ತುತ ಸಮಾಜದಲ್ಲಿ ಸತ್ಯ ಯಾವುದು? ಸುಳ್ಳು ಯಾವುದು? ಎಂಬ ಗೊಂದಲ ನಮ್ಮಲ್ಲಿದೆ’ ಎಂದು ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಮುಖ್ಯಸ್ಥ ಡಾ.ಎಂ.ಮೋಹನ್ ಆಳ್ವ ಹೇಳಿದರು.

ನಮ್ಮ ಸಂಸ್ಕೃತಿಗೆ ಜಗತ್ತಿನಲ್ಲಿ ಉನ್ನತಸ್ಥಾನವಿದೆ. ಸಾಂಸ್ಕೃತಿಕ ನೆಲೆಗಟ್ಟಿನ ಪರಿಕಲ್ಪನೆಯಲ್ಲಿ ನಮ್ಮ ದೇಶ ಜಗತ್ತಿನಲ್ಲಿ ಸದಾ ಮುಂದಿದೆ. ದೇಶದ 140 ಕೋಟಿ ಜನಸಂಖ್ಯೆಯಲ್ಲಿ 52 ಕೋಟಿ ಯುವಕರು ನಮ್ಮಲ್ಲಿದ್ದಾರೆ. ಸಾವಿರಾರು ವರ್ಷದ ಇತಿಹಾಸ ಇರುವ ಸಂಗೀತ ಕಲೆ ಇರುವುದು ಭಾರತದಲ್ಲಿ ಮಾತ್ರ ಕಾಣಲು ಸಾಧ್ಯ. ಪಕ್ಕವಾದ್ಯಗಳು, ನೃತ್ಯ ಪ್ರಕಾರಗಳು, ಯಕ್ಷಗಾನ, ಜಾನಪದ ಕಲೆಗಳು ನಮ್ಮ ಭಾವನೆಗಳನ್ನು ಅಭಿವ್ಯಕ್ತಿಸಲು ಇರುವ ಸಾಂಸ್ಕೃತಿಕ ರೂಪಕ. ಇಂತಹ ಅಮೂಲ್ಯ ಸಂಪತ್ತು ಯುವಪೀಳಿಗೆಗೆ ರವಾನಿಸುವ ಮೂಲಕ ನಾವು ದೇಶವನ್ನು ಭದ್ರವಾದ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ರೂಪಿಸಬೇಕು. ಯುವಕರು ನಮ್ಮ ದೇಶದ ಹೆಮ್ಮೆಯ ಸಂಪತ್ತು. ನಾವು ಎಲ್ಲಾರಿಗೂ ಒಳಿತು ಬಯಸಿದ್ದರೆ ಮಾತ್ರ ಕಿರಿಯರು ಅದನ್ನು ಮುಂದುವರಿಸಲು ಸಾಧ್ಯ. ಅಂತಹ ಹಾದಿಯಲ್ಲಿ ನಾವು ನಡೆದು ಯುವಪೀಳಿಗೆಗೆ ಆದರ್ಶವಾಗಬೇಕು’ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ರೋಟರಿ ಸಂಸ್ಥೆ ಅಂತರರಾಷ್ಟ್ರೀಯ ಮಟ್ಟದಲ್ಲಿ ನಿಸ್ವಾರ್ಥ ಸೇವೆ ಮೂಲಕ ಜನರಲ್ಲಿ ಶಾಶ್ವತವಾದ ಸ್ಥಾನ ಗಳಿಸಿದೆ. ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಸೇವೆಯಲ್ಲಿ ಸದಾ ನಿರತವಾಗಿ ಸಮಸ್ತ ಜನರ ಕ್ರಿಯಾಶೀಲತೆಗೆ ಬದ್ಧವಾಗಿ ದುಡಿಯುತ್ತಿದೆ. ಶೃಂಗೇರಿ ರೋಟರಿ ಸಂಸ್ಥೆ ಮಾದರಿಯಾಗಿದೆ’ ಜಿಲ್ಲಾ 3182ರ ಗವರ್ನರ್ ಕೆ.ಫಾಲಾಕ್ಷ ಮಾತನಾಡಿ, ‘ಭಾರತದ ಶ್ರೇಷ್ಠ ಸಾಂಸ್ಕೃತಿಕ ಮೌಲ್ಯಗಳಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಈ ಇತಿಹಾಸದ ಅನನ್ಯತೆಯನ್ನು ಸಾಕ್ಷಾತ್ಕರಿಸುವ ಪ್ರಕ್ರಿಯೆಗಳಿಗೆ ಸಂಸ್ಥೆಗಳು ಶ್ರಮಿಸಬೇಕು. ಹಿರಿಯರ ಜ್ಞಾನದಿಂದ ಆವಿರ್ಭವಿಸಿದ ಕಲೆಯ ಅರಿವನ್ನು ನಾವು ಸಮಾಜಕ್ಕೆ ನೀಡಬೇಕು. ಆಗ ಮಾತ್ರ ಮೌಲ್ಯಗಳು ಉಳಿಯುತ್ತದೆ’ ಎಂದು ಜೆಸಿಬಿಎಂ ಕಾಲೇಜಿನ ಪ್ರಾಂಶುಪಾಲ ಎಂ.ಸ್ವಾಮಿ ಮಾತನಾಡಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಲೈಂಗಿಕ ದೌರ್ಜನ್ಯ: ಮೆಡಿಕಲ್ ಕಾಲೇಜು​ ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿ ದೂರು

ಕಾರ್ಯಕ್ರಮದಲ್ಲಿ ಪಾಲಾಕ್ಷ ಗವರ್ನರ್ ಬಿ.ಸಿ.ಗೀತಾ, ಜಿಲ್ಲಾ ಸಾಂಸ್ಕೃತಿಕ ಸಮಿತಿ ಮುಖ್ಯಸ್ಥ ವಿನಯ್ ಎಚ್.ಡಿ, ವಲಯ-6ರ ಸಹಾಯಕ ಗವರ್ನರ್ ರಾಜಗೋಪಾಲ್ ಜೋಶಿ, ವಲಯ ಸೇನಾನಿ ಮಹೇಶ್ ಡಿ, ಇವೆಂಟ್‍ನ ಮುಖ್ಯಸ್ಥ ಎಚ್.ಎಸ್. ನಟೇಶ್, ಪ್ರಿಯದರ್ಶಿನಿ ಹೆಗ್ಡೆ, ಸುರೇಂದ್ರ ನಾಯಕ್, ಬಿ.ಎಂ.ಭಟ್, ಬಿ.ಎನ್.ರಮೇಶ್ ಹಾಗೂಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...