ರೈಲ್ವೇ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುವೊಂದು ತಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಾಗಿದ್ದು, ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ ನೀರು ಉಕ್ಕಿ ಹರಿದ ಪರಿಣಾಮ ಹಳಿಯಲ್ಲಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿದ್ದವು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮಾತ್ರ ಪ್ರಾಯಶ್ಚಿತ್ತ ಸಾಧ್ಯ; ಸಿ.ಟಿ ರವಿ
ಬೆಳಗ್ಗೆ ಚಿಕ್ಕಮಗಳೂರಿನಿಂದ ಶಿವಮೊಗ್ಗ ಕಡೆಗೆ ಹೊರಟ್ಟಿದ್ದ ಪ್ಯಾಸೆಂಜರ್ ರೈಲು ಕಣಿವೆ ಬಳಿ ಆಗಮಿಸಿದ ವೇಳೆ, ಲೋಕೋ ಪೈಲಟ್ ಇಚ್ಛೆತ್ತು ರೈಲನ್ನು ನಿಲ್ಲಿಸಿದ್ದಾರೆ. ಈ ವೇಳೆ ರೈಲ್ವೇ ಸಿಬ್ಬಂದಿಗಳು ತುರ್ತು ದುರಸ್ತಿ ಕಾರ್ಯ ಕೈಗೊಂಡು ರೈಲಿನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ತಾತ್ಕಾಲಿಕ ದುರಸ್ತಿ ಕಾರ್ಯ ಪೂರ್ಣಗೊಂಡ 30 ನಿಮಿಷಗಳ ಬಳಿಕ ರೈಲು ಶಿವಮೊಗ್ಗದತ್ತ ಪ್ರಯಾಣ ಬೆಳೆಸಿದೆ ಎನ್ನಲಾಗಿದೆ.





