ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮದಲ್ಲಿ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ.
ಮೆಣಸೆಯ ಮಂಜುನಾಥ್ ಎಂಬುವವರ ಮನೆಯಲ್ಲಿ ಸೋಮವಾರ ರಾತ್ರಿ 9 ಗಂಟೆ ಸಮಯದಲ್ಲಿ ಯಾರು ಇಲ್ಲದ ವೇಳೆ ನುಗ್ಗಿರುವ ಕಳ್ಳರು ಚಿನ್ನ, ಬೆಳ್ಳಿ ಸೇರಿದಂತೆ ನಗದು, ಬೆಲೆ ಬಾಳುವ ವಸ್ತುಗಳನ್ನ ಕಳ್ಳತನ ಮಾಡಿದ್ದಾರೆ.
ಹಾಗೆಯೇ, ಕಳೆದ ಶುಕ್ರವಾರ (ಡಿ.5) ವಿದ್ಯಾರಣ್ಯಪುರ ಗ್ರಾಮದ ಕೇರೊಡಿ ಬಳಿ ರಾತ್ರಿ 8 ಗಂಟೆ ಸುಮಾರಿಗೆ ಹಿಂದಿನಿಂದ ಬಂದ ಬೈಕ್ ಸವಾರ ಭವಾನಿ ಎಂಬ ಮಹಿಳೆಯ ಮಾಂಗಲ್ಯ ಸರವನ್ನು ಅರ್ಧ ಭಾಗದಷ್ಟು ಕಿತ್ತುಕೊಂಡು ಹೋಗಿದ್ದಾನೆ. ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡಾನೆ ದಾಳಿ; ಬೆಳೆ ನಾಶ
ಆದರೇ, ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಿಲ್ಲ ಎನ್ನಲಾಗಿದೆ.





