ಚಿಕ್ಕಮಗಳೂರು | ಸಿಂಧೂರ ಎಂಬ ಹೆಸರಿಗೆ ಮೋದಿ ಬೆಲೆ ತಂದುಕೊಟ್ಟಿದ್ದಾರೆ: ಸಿ ಟಿ ರವಿ

Date:

ಪ್ರಧಾನಿ ಮೋದಿ ಅವರು ಕೊಟ್ಟ ಮಾತು ತಪ್ಪೋದಿಲ್ಲ ಎಂಬ ನಂಬಿಕೆ ಇತ್ತು. ಭಾರತೀಯ ಸೇನೆ ಮೇಲೂ ಅಪಾರವಾದ ನಂಬಿಕೆ ಇತ್ತು. ಸಿಂಧೂರ ಎಂಬ ಹೆಸರಿಗೆ ಮೋದಿ, ಸೇನೆ ಬೆಲೆ ತಂದುಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.

ಪಾಕ್‌ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯ ಕ್ಷಿಪಣಿ ದಾಳಿ ಕುರಿತು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

“ಇಂದು ನಮಗೆ ಎರಡನೇ ದೀಪಾವಳಿ ಹಬ್ಬ. ಭಾರತೀಯರ ಸಿಂಧೂರಕ್ಕೆ ಕೈ ಹಾಕಿದ್ದಕ್ಕೆ ಪಾಕಿಗೆ ತಕ್ಕ ಶಾಸ್ತಿಯಾಗಿದೆ. ಭಾರತಮಾತೆ, ಸಹೋದರಿಯರ ಸಿಂಧೂರ ಅಳಿಸಲು ಬಂದವರನ್ನು ಇಂದು ನಾವು ಅಳಿಸಿದ್ದೇವೆ. ಮೋದಿಯವರು ಶತ್ರುಗಳನ್ನು ಪೂರ್ಣ ನಿರ್ನಾಮ ಮಾಡಿ ಅವರನ್ನು ಸಂಪೂರ್ಣವಾಗಿ ಮುಗಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಆಪರೇಷನ್​ ಸಿಂಧೂರ್ʼ ಮೂಲಕ ಉಗ್ರರ ವಿರುದ್ಧ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಹೀಗಿರುವಾಗ ರಾಜ್ಯ ಕಾಂಗ್ರೆಸ್​ ‘ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ’ ಎಂದು ಟ್ವೀಟ್​ ಮಾಡಿತ್ತು. ಜನರ ತೀವ್ರ ಆಕ್ರೋಶದ ಬಳಿಕ ಕಾಂಗ್ರೆಸ್​ ಆ ಟ್ವೀಟ್​​ನ್ನು ಡಿಲೀಟ್​ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿ ಟಿ ರವಿ, “ನಾಗರಿಕರ ನಡುವೆ ಶಾಂತಿ ಇರಬೇಕು. ಶತ್ರುಗಳನ್ನು ಮಟ್ಟ ಹಾಕುವುದೂ ಶಾಂತಿಯೇ. ರಾಜ್ಯ ಕಾಂಗ್ರೆಸ್ ಟ್ವೀಟ್ ಡಿಲೀಟ್ ಮಾಡಿರುವುದನ್ನು ನೋಡಿದ್ದೇನೆ. ಇದು ಬದಲಾಗಿರುವ ಕಾಂಗ್ರೆಸ್ ಮನಸ್ಥಿತಿ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಯೋಗ್ಯತೆಯನ್ನು ಕಳೆದುಕೊಳ್ಳುತ್ತಿದೆ” ಎಂದರು.

ಇದನ್ನೂ ಓದಿ: ಚಿಕ್ಕಮಗಳೂರು | ಅನಧಿಕೃತ ಶಾಲೆಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...