ಚಿಕ್ಕಮಗಳೂರು | ಶ್ರೀ ಸವಿತಾ ಮಹರ್ಷಿ, ಹಡಪದ ಅಪ್ಪಣ ಜಯಂತಿ; ಪೂರ್ವಭಾವಿ ಸಭೆಗೆ ನಿರ್ಲಕ್ಷ್ಯ; ಸವಿತಾ ಸಮಾಜ

Date:

ಜಿಲ್ಲಾಡಳಿತ ವತಿಯಿಂದ ನಡೆಸುವ ಶ್ರೀ ಸವಿತಾ ಮಹರ್ಷಿ ಜಯಂತಿ ಹಾಗೂ ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮಗಳ ತಯಾರಿಯ ಪೂರ್ವಭಾವಿ ಸಭೆಗೆ ಆಹ್ವಾನಿಸದೆ ನಿರ್ಲಕ್ಷಿಸುತ್ತಿದ್ದಾರೆಂದು ಸವಿತಾ ಸಮಾಜ ಜಿಲ್ಲಾಧ್ಯಕ್ಷರಾದ ವಿಶ್ವನಾಥ ತಿಳಿಸಿದರು.

ಸವಿತಾ ಸಮಾಜದ ಮಹರ್ಷಿಗಳಾದ ಶ್ರೀ ಸವಿತಾ ಮಹರ್ಷಿಯವರ ಜಯಂತಿ ಆಚರಣೆ ಹಾಗೂ ಸವಿತಾ ಸಮಾಜ ಅಭಿವೃದ್ಧಿ ನಿಗಮ ಮಾಡಬೇಕೆಂದು ಜಿಲ್ಲಾ ಸವಿತಾ ಸಮುದಾಯ ಮೀಸಲಾತಿ ಒಕ್ಕೂಟದ ಅಡಿಯಲ್ಲಿ ಜಿಲ್ಲಾ ಸವಿತಾ ಸಮಾಜದ ಸಂಘಟನೆಯ ಮುಖಂಡರುಗಳಾದ ನಾವುಗಳು ಆಜಾದ್ ಪಾರ್ಕ್ ವೃತ್ತದಲ್ಲಿ ಸಹಿಸಂಗ್ರಹ ಅಭಿಯಾನ ನಡೆಸಿದ ಪರಿಣಾಮ ನಮ್ಮ ಒತ್ತಾಯಕ್ಕೆ ಮಣಿದು ಘನ ಸರ್ಕಾರ ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆಯನ್ನು ಜಾರಿಗೊಳಿಸಿತು. ಹಾಗೆಯೇ, ಸವಿತಾ ಸಮಾಜ ಜಿಲ್ಲೆಯಲ್ಲಿ ನೋಂದಣಿಯಾದ ಅಧಿಕೃತ ಸಂಘವಾಗಿದೆ. ನಮ್ಮ ಸಮಾಜದ ಬಂಧುಗಳ ಏಳಿಗೆಗಾಗಿ ಅನೇಕ ಹೋರಾಟ, ಕಾರ್ಯಕ್ರಮ, ಜಾಗೃತಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಈ ಶ್ರೀ ಸವಿತಾ ಮಹರ್ಷಿ ಜಯಂತಿ ಹಾಗೂ ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮ ನಮ್ಮಂತ ಧಮನಿತ ಸಮುದಾಯಕ್ಕೆ ನಮ್ಮ ಅಹವಾಲು ತಿಳಿಸಲು ಮುಖ್ಯ ವೇದಿಕೆಯಾಗಿದೆ. ಆದರೆ ಈ ಜಯಂತಿಯ ನಿರ್ವಹಣೆಯನ್ನು ಮಾಡುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ಜಯಂತಿಯ ಪೂರ್ವಭಾವಿ ಸಭೆಗಳಿಗೆ ನಮ್ಮನ್ನು ಆಹ್ವಾನಿಸದೆ ಕಡೆಗಣಿಸುವ ಕೆಲಸ ಮಾಡುತ್ತಿದ್ದಾರೆಂದು ಸವಿತಾ ಸಮಾಜದ ಮುಖಂಡ ಸತೀಶ್ ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಆನೆ ದಾಳಿ; ಕಾರ್ಮಿಕ ಮಹಿಳೆ ಸಾವು 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಇಲ್ಲಿನ ಅಧಿಕಾರಿಗಳಾದ ಶ್ರೀಯುತ ಡಾ|| ಸಿ. ರಮೇಶ್, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಬಳಿ ಹಲವು ಬಾರಿ ಮೌಖಿಕವಾಗಿ ತಿಳಿಸಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಸವಿತ ಸಮಾಜದ ಜನಾಂಗಕ್ಕೆ ಅಪಮಾನ ಮಾಡಿದಂತಾಗಿದೆ. ಸವಿತಾ ಸಮಾಜದ ಶ್ರೀ ಸವಿತಾ ಮಹರ್ಷಿ ಜಯಂತಿಗೆ ನಮ್ಮನ್ನೇ ಆಹ್ವಾನಿಸದೆ ಪೂರ್ವಭಾವಿ ಸಭೆಯಾಗಲಿ, ಕಾರ್ಯಕ್ರಮವಾಗಲಿ ನಡೆಸಿದರೆ ಯಾರಿಗೆ ಲಾಭವಾಗುತ್ತಿದೆ ಗೊತ್ತಾಗುತ್ತಿಲ್ಲವೆಂದು ಸವಿತ ಸಮಾಜದ ಮುಖಂಡ ವಿಶ್ವನಾಥ ತಿಳಿಸಿದರು. ಈ ವೇಳೆ ಸವಿತಾ ಸಮಾಜ ಮುಖಂಡರು, ಗೌಸ್ ಮೋಹದ್ದಿನ್ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...