ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಧಾರುಣ ಘಟನೆ ನಡೆದಿದೆ.
ಮೃತ ಯುವಕ ಅಭಿಷೇಕ್ ತನ್ನ ಅಕ್ಕನ ಮನೆಗೆ ಬಂದಿದ್ದ ವೇಳೆ ಸ್ನೇಹಿತರೊಂದಿಗೆ ಭದ್ರಾ ನದಿಗೆ ಈಜಲು ತೆರಳಿದ್ದಾನೆ. ಅಭಿಷೇಕ್ ಅವರ ಅಕ್ಕ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಈ ಘಟನೆ ತಿಳಿಯುತ್ತಿದ್ದಂತೆ ಕಳಸ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ವಿದ್ಯುತ್ ತಂತಿ ದುಬಾರಿ; ಕಳ್ಳತನ ಪ್ರಕರಣ ದಾಖಲು
ಈ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಯುತ್ತಿದೆ.





