ಚಿಕ್ಕಮಗಳೂರು | ದಲಿತ ಯುವಕನ ಮೇಲೆ ಹಲ್ಲೆ; ನಾಲ್ವರು ಆರೋಪಿಗಳ ಬಂಧನ

Date:

ಗೊಲ್ಲರ ಬೀದಿಗೆ ಹೋಗಿದ್ದಕ್ಕೆ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದವರು ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೇರಮರಡಿ ಗ್ರಾಮದ ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಜನವರಿ 1ರಂದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಮನೆ ಕೆಡವುವ ಕೆಲಸಕ್ಕೆ ಎಂ.ಸಿ ಹಳ್ಳಿ ಗ್ರಾಮದ ಮಾದಿಗ ಸಮುದಾಯದ ಯುವಕ ಮಾರುತಿ ತೆರಳಿದ್ದರು. ಈ ವೇಳೆ, ಜೆಸಿಬಿಗೆ ಡಿಶ್‌ ವೈರ್ ತಗುಲಿ, ವೈರ್‌ ತುಂಡಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಆತನ ಮೇಲೆ ಹಲ್ಲೆ ಗೊಲ್ಲ ಸಮುದಾಯದ ಗುಂಪು, ‘ಮಾದಿಗ ಸಮುದಾಯವರು ನಮ್ಮ ಬೀದಿಗೆ ಯಾಕೆ ಬಂದಿದ್ದೀರಿ. ನೀವು ಬಂದರೆ ನಮ್ಮ ದೇವರಿಗೆ ಮೈಲಿಗೆಯಾಗುತ್ತದೆ’ ಎಂದು ಹತ್ತಿ ಹಲ್ಲೆ ಮಾಡಿತ್ತು. ಕೆಲವರು ಚಪ್ಪಲಿ ಹಾಕಿದ್ದ ಕಾಲಿನಿಂದ ಒದ್ದಿದ್ದರು.

ಮಾತ್ರವಲ್ಲದೆ, ಆತನ ಜೇಬಿನಲ್ಲಿದ್ದ 20,000 ರೂಪಾಯಿಯನ್ನು ಕಸಿದುಕೊಂಡು, 1 ಲಕ್ಷ ರೂ. ದಂಡ ಕಟ್ಟಬೇಕು. ಇಲ್ಲವಾದಲ್ಲಿ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇವೆಂದು ಬೆದರಿಕೆ ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತ್ರಸ್ತ ಯುವಕ ಮಾರುತಿ ತರೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆತನ ದೂರಿನ ಆಧಾರದ ಮೇಲೆ 15 ಮಂದಿ ವಿರುದ್ಧ ಐಪಿಸಿ ಸೆಕ್ಷನ್‌ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್​ಐಆರ್​ ದಾಖಲಾಗಿತ್ತು.

ತನಿಖೆ ನಡೆಸುತ್ತಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ 11 ಮಂದಿ ಆರೋಪಿಗಳ ಬಂಧನಕ್ಕೆ ಹುಡುಕಾಟ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...